ಕ್ರೈಂ ಸ್ಟೋರಿಜಿಲ್ಲೆ

ಗಂಡನ ಕಿರುಕುಳ ತಾಳಲಾರದೆ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ

ಮೈಸೂರು ; ಮದುವೆಯಾಗಿ 12 ವರ್ಷವಾದರೂ ಹಣಕ್ಕಾಗಿ ಗಂಡ ಮತ್ತು ಆತನ ಮನೆಯವರು ಕಿರುಕುಳ ನೀಡುತ್ತಿದ್ದ ಪರಿಣಾಮ ಗೃಹಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜಗೂಡು ತಾಲೂಕಿನ ಹೊಸಕೋಟೆಯಲ್ಲಿ ಈ ಘಟನೆ ನಡೆದಿದ್ದು, ವಿಜಯಲಕ್ಷ್ಮಿ (35) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಈಕೆ ನಂಜನಗೂಡು ತಾಲೂಕಿನ ಹೊಸಕೋಟೆಯ ಹರೀಶ್ ಎಂಬವರನ್ನು ಮದುವೆಯಾಗಿ 12 ವರ್ಷಗಳಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ವರದಕ್ಷಿಣೆ ಹಣಕ್ಕಾಗಿ ಗಂಡ ಹರೀಶ್, ಅತ್ತೆ ಮಲ್ಲಿಗಮ್ಮ, ಮಾವ ಮಹದೇವಮೂರ್ತಿ, ಮೈದುನರಾದ ರಾಘವೇಂದ್ರ ಮತ್ತು ಮಹೇಂದ್ರ ದಿನ ಪಿಡಿಸುತ್ತಿದ್ದರು.

ಕಿರುಕುಳ ತಾಳಲಾರದೆ ಮನನೊಂದು ಇಬ್ಬರು ಮಕ್ಕಳನ್ನು ಬಿಟ್ಟು ಗಂಡನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿಯುತ್ತಿದ್ದಂತೆ ಗಂಡ, ಅತ್ತೆ, ಮಾವ, ಮೈದುನರು ಪರಾರಿಯಾಗಿದ್ದಾರೆ.

ವಿಜಯಲಕ್ಷ್ಮಿ ಪೋಷಕರು ಚಿನ್ನಾಭರಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆದರೆ ಗಂಡನ ಮನೆಯವರು ಮಾತ್ರ ಹಣಕ್ಕಾಗಿ ಆಕೆಯನ್ನು ದಿನ ಪಿಡಿಸುತ್ತಿದ್ದರು. ವರದಕ್ಷಿಣೆ ವಿಚಾರವಾಗಿ ಆಗಾಗ ಮನೆಯಲ್ಲಿ ಗಲಾಟೆ ನಡೆಯುತಿತ್ತು. ಈ ಹಿಂದೆಯೂ ಕೂಡ ಪೊಲೀಸ್ ಠಾಣೆಯಲ್ಲಿ ಗಲಾಟೆ ವಿಚಾರವಾಗಿ ಹಲವು ಬಾರಿ ವಿಜಯಲಕ್ಷ್ಮಿ ದೂರು ನೀಡಿದ್ದರು. ಇದೀಗ 12 ವರ್ಷಗಳ ದಾಂಪತ್ಯ ಜೀವನದ ನಂತರ ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments (0)

Your email address will not be published. Required fields are marked *

Back to top button