ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಹೆಚ್ಚಿನ ಚಿಕಿತ್ಸೆ ಹಿನ್ನಲೆಯಲ್ಲಿ ಇಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಲಿದ್ದಾರೆ.
ಕಳೆದ ಬಾರಿಯೂ ಚೆನ್ನೈ ಅಪೊಲೋ ಆಸ್ಪತ್ರೆಯಲ್ಲಿ ಹೃದಯಕ್ಕೆ ಸಂಬಂಧಿಸಿ ಚಿಕಿತ್ಸೆ ಪಡೆದುಕೊಂಡಿದ್ದರು. ಕಳೆದ ನಾಲ್ಕು ದಿನಗಳಿಂದ ಕುಮಾರಸ್ವಾಮಿ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿದೆ. ಹೀಗಾಗಿ ಚೆನ್ನೈಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಕೇಂದ್ರ ಸಚಿವರಾದ ಬಳಿಕ ಕುಮಾರಸ್ವಾಮಿ ಅವರು ನಿರಂತರ ಪ್ರವಾಸದಿಂದಾಗಿ ಆಯಾಸವಾಗಿ, ಅನಾರೋಗ್ಯಕ್ಕೆ ಒಳಗಾಗಿದ್ದಾರೆ.