ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವೆಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್. ಡಿ ಕುಮಾರಸ್ವಾಮಿ ಅವರು ಪ್ರತಿನಿತ್ಯ ಎಸ್ಪಿ, ಡಿಸಿಯಿಂದ ಮಾಹಿತಿ ಪಡೆಯುತ್ತಿದ್ದಾರೆ. ಸೆ. 12ರ ಬಳಿಕ ಕುಮಾರಸ್ವಾಮಿ ಅವರು ಮದ್ದೂರಿಗೆ ಭೇಟಿ ನೀಡಲಿದ್ದಾರೆ.
ಸದ್ಯ ಹೆಚ್‌ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿದ್ದು, ಸೆ.12 ಉಪರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ಕಾರ್ಯಕ್ರಮ ಮುಗಿಸಿಕೊಂಡು ಸೆ.12ರಂದೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಬಳಿಕ ಮದ್ದೂರಿಗೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.