Top Newsವೈರಲ್ ನ್ಯೂಸ್ಸಿನಿಮಾಸುದ್ದಿ

ಗೌರವ ಡಾಕ್ಟರೇಟ್ ನಿರಾಕರಿಸಿದ ಕಿಚ್ಚ

ತುಮಕೂರು: ಕನ್ನಡ ಅಭಿಮಾನಿಗಳ ನೆಚ್ಚಿನ ನಟ ಕಿಚ್ಚ ಸುದೀಪ್ ಹಲವಾರು ಕನ್ನಡ ಸಿನಿಮಾಗಳ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಸುದೀಪ್ ಅವರು ಚಿತ್ರಂಗಕ್ಕೆ ನೀಡಿದ ಕೊಡುಗೆ ಅಪಾರ. ಆ ಪೈಕಿ ಕಿಚ್ಚ ಸುದೀಪ್ ಕೂಡ ಒಬ್ಬರು. ಅವರ ಕಾರ್ಯಕ್ಕೆ ಮೆಚ್ಚಿ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ ಸುದೀಪ್ ಅವರು ಇದನ್ನು ನಿರಾಕರಿಸಿದ್ದಾರೆ.

ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನು ಗುರುತಿಸಿ ಸಂದ ಪ್ರಶಸ್ತಿಯನ್ನು ಸುದೀಪ್ ನಿರಾಕರಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ತುಮಕೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆಸಿ ಸುದೀಪ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿರುವುದಾಗಿ ಗಮನಕ್ಕೆ ತಂದಿದೆ. ಆಗ ಸುದೀಪ್ ವಿಶ್ವವಿದ್ಯಾಲಯದ ನಿರ್ಧಾರಕ್ಕೆ ಹೃದಯಪೂರ್ವಕವಾಗಿ ಧನ್ಯವಾದ ತಿಳಿಸಿ ವಿನಮ್ರವಾಗಿ ಸಮಾಜದಲ್ಲಿ ಸೇವೆ ಮಾಡಿದ ನನಗಿಂತ ಅನೇಕ ಹಿರಿಯರಿದ್ದಾರೆ. ಅವರಿಗೆ ಡಾಕ್ಟರೇಟ್ ನೀಡಿ ಎಂದು ತಿಳಿಸಿದ್ದಾರೆ.

 

Comments (0)

Your email address will not be published. Required fields are marked *

Back to top button