ರಾಜಕೀಯರಾಜ್ಯ

ಕುನಿಗನಹಳ್ಳಿ ಗ್ರಾ.ಪಂ ಎಲೆಕ್ಷನ್​​​ನಲ್ಲಿ​ ಅವಿರೋಧ ಆಯ್ಕೆ..!

ಹಾಸನ ಜಿಲ್ಲೆಯ ಕುನಿಗನಹಳ್ಳಿಲ್ಲಿಂದು ಗ್ರಾಮ ಪಂಚಾಯಿತಿ ಎಲೆಕ್ಷನ್​ ನಡೆದಿದ್ದು,ಚುನಾವಣಾ ಪ್ರಕ್ರಿಯೆಯನ್ನು ತಹಸೀಲ್ದಾರ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆ ಆಗಿರುವುದಾಗಿ ತಿಳಿಸಿದರು.. ಅಧ್ಯಕ್ಷರಾಗಿ ಕಾಂಗ್ರೆಸ್ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆಯಾಗಿದ್ದಾರೆ…ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಪ್ರಕಾಶ್ ಮಾತಾನಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನಾಗಿ ಮಾಡಿದಕ್ಕೆ ಸದಸ್ಯರಿಗೆ ಅಭಿನಂದನೆ ತಿಳಿಸಿದ್ರು.. ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲು ಸಹಕರಿಸಿದ್ದಾರೆ.. ಈ ಸಂದರ್ಭದಲ್ಲಿ ನನ್ನನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲಾ ಮತದಾರರಿಗೆ ಅಭಿನಂದನೆ.. ನನ್ನನ್ನು ಅಧ್ಯಕ್ಷ್ಯನಾಗಿ ಆಯ್ಕೆ ಮಾಡಲು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಮುಖಂಡರಿಗೂ ಹಾಗೂ ಹಿರಿಯರಿಗೂ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸಿ ಪಂಚಾಯಿತಿ ಈ ಹಿಂದೆ ಇದ್ದ ಅಧ್ಯಕ್ಷರಿಗೆ ಹೇಗೆ ಸಹಕಾರ ನೀಡಿದ್ದಿರೋ ನನಗೂ ಕೂಡ ನಿಮ್ಮೆಲ್ಲರ ಸಹಕಾರ ನೀಡಿ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸಿ ಪಂಚಾಯಿತಿ ವ್ಯಾಪ್ತಿಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವಲ್ಲಿ ಕಾರ್ಯನಿರ್ವಹಿಸುತ್ತೇನೆ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಪಕ್ಷ ಬೇದ ಮಾಡದೆ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು..ನೂತನ ಉಪಾಧ್ಯಕ್ಷೆ ಶಶಿಕಲಾ ಮಾತನಾಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಿದ್ದು ಎಲ್ಲ ಸದಸ್ಯರ ಸಹಕಾರ ಪಡೆದು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸುತ್ತೇನೆ.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆ, ನೀರು ಬೀದಿದೀಪ, ಚರಂಡಿಗಳಿಗೆ ಮೊದಲ ಆಧ್ಯತೆ ನೀಡಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿ ಮಾಡುತ್ತೇನೆ. ಹಾಗೂ ಈ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲ ಸದಸ್ಯರುಗಳಿಗೆ ಅಭಿನಂಧನೆ ಎಂದು ನೂತನ ಉಪಾಧ್ಯಕ್ಷ್ಯ ಶಶಿಕಲಾ ಹೇಳಿದ್ರು..

Comments (0)

Your email address will not be published. Required fields are marked *

Back to top button