UPSCಯಲ್ಲಿ ಕನ್ನಡಿಗರ ಕಂಪು; 25 ಮಂದಿ ಪಾಸ್..!

ಬಹುನಿರೀಕ್ಷಿತ 2025-26ನೇ ಸಾಲಿನ ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಇಂದು ಪ್ರಕಟವಾಗಿದ್ದು, ದೇಶದಾದ್ಯಂತ ಒಟ್ಟು 958 ಅಭ್ಯರ್ಥಿಗಳು ವಿವಿಧ ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಈ ಬಾರಿಯ ಫಲಿತಾಂಶದಲ್ಲಿ ಕರ್ನಾಟಕದ ಅಭ್ಯರ್ಥಿಗಳು ಭರ್ಜರಿ ಸಾಧನೆ ಮಾಡಿದ್ದು, ರಾಜ್ಯದ ಒಟ್ಟು 25 ಸಾಧಕರು ದೇಶದ ಅತ್ಯುನ್ನತ ಸೇವೆಯಾದ ಐಎಎಸ್, ಐಪಿಎಸ್ ಹಾಗೂ ಐಎಫ್ಎಸ್ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇವರಲ್ಲಿ ಕಿರಣ್ ಕಮಾಟೆ ಅವರು ಕರ್ನಾಟಕ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆಯುವ ಮೂಲಕ ಕರುನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇನ್ನು ಅಖಿಲ ಭಾರತ ಮಟ್ಟದಲ್ಲಿ ಅನುಜ್ ಅಗ್ನಿಹೋತ್ರಿ ಅವರು ಪ್ರಥಮ ರ‍್ಯಾಂಕ್ ಪಡೆದು ದೇಶಕ್ಕೆ ಮಾದರಿಯಾಗಿದ್ದಾರೆ.
ಈ ಬಾರಿಯ ಫಲಿತಾಂಶದಲ್ಲಿ ಬೆಂಗಳೂರಿನ ವಿಜಯನಗರದಲ್ಲಿರುವ ‘ಇಂಡಿಯಾ ಫಾರ್ ಐಎಎಸ್’ ಕೋಚಿಂಗ್ ಅಕಾಡೆಮಿಯು ಐತಿಹಾಸಿಕ ದಾಖಲೆ ಬರೆದಿದೆ. ಕರ್ನಾಟಕದಿಂದ ತೇರ್ಗಡೆಯಾದ ಒಟ್ಟು 25 ಅಭ್ಯರ್ಥಿಗಳ ಪೈಕಿ ಬರೋಬ್ಬರಿ 20 ಮಂದಿ ಇದೇ ಒಂದೇ ಸಂಸ್ಥೆಯಲ್ಲಿ ತರಬೇತಿ ಪಡೆದವರಾಗಿದ್ದಾರೆ ಎಂಬುದು ವಿಶೇಷ. ಅಂದರೆ ರಾಜ್ಯದಿಂದ ಆಯ್ಕೆಯಾದವರಲ್ಲಿ ಶೇಕಡಾ 80ರಷ್ಟು ಮಂದಿ ಈ ಅಕಾಡೆಮಿಯ ವಿದ್ಯಾರ್ಥಿಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷಾ ಕ್ಷೇತ್ರದಲ್ಲಿ ಈ ಸಂಸ್ಥೆಯ ಗುಣಮಟ್ಟದ ತರಬೇತಿಯನ್ನು ಸಾಬೀತುಪಡಿಸಿದೆ. ಪರಿಣಿತರ ನಿರಂತರ ಮಾರ್ಗದರ್ಶನ ಮತ್ತು ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದಾಗಿ ಇಂದು ವಿಜಯನಗರದ ಈ ಅಕಾಡೆಮಿಯು ಐಎಎಸ್ ಆಕಾಂಕ್ಷಿಗಳ ಆಶಾಕಿರಣವಾಗಿ ಹೊರಹೊಮ್ಮಿದೆ.
ಯುಪಿಎಸ್‌ಸಿ ಎಂಬ ಕಠಿಣ ಸವಾಲನ್ನು ಗೆದ್ದು ದೇಶದ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸಿದ್ಧರಾಗಿರುವ ಎಲ್ಲಾ ಸಾಧಕರಿಗೆ ನಾಡಿನಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ತಮ್ಮ ಸತತ ಛಲ ಹಾಗೂ ಪ್ರಯತ್ನದಿಂದ ಈ ಗುರಿ ತಲುಪಿರುವ ಕನ್ನಡಿಗರ ಸಾಧನೆಯು ಮುಂದಿನ ದಿನಗಳಲ್ಲಿ ಸಾವಿರಾರು ಯುವಕರಿಗೆ ಸ್ಫೂರ್ತಿಯಾಗುವುದರಲ್ಲಿ ಸಂಶಯವಿಲ್ಲ.



