
ನವದೆಹಲಿ: ಉತ್ತರ ಪ್ರದೇಶದಲ್ಲಿ (Uttar Pradesh) ರೈಲು ಹಳಿಗಳ ಮೇಲೆ 6 ಕೆಜಿ ತೂಕದ ಮರದ ತುಂಡುಗಳನ್ನು ಇರಿಸಿ ರೈಲು (Train) ಹಳಿ ತಪ್ಪಿಸುವ ಯತ್ನ ನಡೆದಿದೆ.
ದೆಹಲಿ (Delhi) ಮತ್ತು ಲಖನೌ ನಡುವೆ ಬರೇಲಿ-ವಾರಣಾಸಿ ಎಕ್ಸ್‌ಪ್ರೆಸ್ ರೈಲು ಸಾಗುವ ಹಳಿಯ ಮೇಲೆ ಸುಮಾರು 6 ಕೆಜಿಗೂ ಹೆಚ್ಚು ತೂಕದ ಎರಡು ಅಡಿ ಉದ್ದದ ಮರದ ತುಂಡುಗಳು ಕಂಡುಬಂದಿದೆ. ರೈಲು ಅದಕ್ಕೆ ಡಿಕ್ಕಿ ಹೊಡೆದು ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ. ಮರದ ತುಂಡುಗಳು ಲೋಹದ ಚಕ್ರಗಳ ಅಡಿಯಲ್ಲಿ ಸಿಕ್ಕಿಕೊಂಡಿದೆ. ಲೋಕೋ ಪೈಲಟ್ ರೈಲನ್ನು ಸುರಕ್ಷಿತವಾಗಿ ನಿಲ್ಲಿಸುವಲ್ಲಿ ಯಶಸ್ವಿಯಾದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಈ ಘಟನೆಯು ಹಳಿಗಳ ಮೇಲಿನ ಸಿಗ್ನಲಿಂಗ್ ಸಾಧನವನ್ನು ಹಾನಿಗೊಳಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲಿಹಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ…..


