Wednesday, April 30, 2025
24 C
Bengaluru
LIVE
ಮನೆಜಿಲ್ಲೆಮಡಗಾಂವ್ ನಡುವೆ ವಂದೇ ಭಾರತ್ ಚುಕ್ ಬುಕ್ ಸದ್ದು

ಮಡಗಾಂವ್ ನಡುವೆ ವಂದೇ ಭಾರತ್ ಚುಕ್ ಬುಕ್ ಸದ್ದು

ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ ಗೆ ಶನಿವಾರ 12.12 ಕ್ಕೆ ಮೊದಲ ಸಂಚಾರ ಶುರು ಮಾಡಿತು.
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್ ಸೇರಿ 6 ವಂದೇ ಭಾರತ್ ಹಾಗೂ 2 ಅಮೃತ್ ಭಾರತ್ ರೈಲುಗಳಿಗೆ ಏಕ ಕಾಲದಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ನೀಡಿದರು.

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ದೇಶದಲ್ಲಿ 2014 ರ ಬಳಿಕ ಪರಿವರ್ತನೆ ಯುಗ ಆರಂಭವಾಗಿದೆ. ರೈಲ್ವೆ ಇಲಾಖೆಯಲ್ಲಿ ಅದ್ಭುತ ಪರಿವರ್ತನೆ, ಅಮೂಲಾಗ್ರ ಬದಲಾವಣೆ ಆಗಿದೆ ಎಂದರು.

ಮಂಗಳೂರಿನಿಂದ ಬೆಂಗಳೂರಿಗೆ ವಂದೇ ಭಾರತ್ ಬೇಡಿಕೆ ಇದೆ. ರೈಲ್ವೆ ಹಳಿ ವಿದ್ಯುದೀಕರಣ ಆಗುತ್ತಿದೆ. ಮಾರ್ಚ್ ನಲ್ಲಿ ಪೂರ್ಣಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಏಪ್ರಿಲ್ ನಲ್ಲಿ ಬೆಂಗಳೂರಿಗೆ ವಂದೇ ಭಾರತ್ ಆರಂಭವ ಆಗಲಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್ ಅವರು ಮಾತನಾಡಿ, 35 ವರ್ಷಗಳಲ್ಲಿ ಹೊಸ ಪ್ಲ್ಯಾಟ್ ಫಾರ್ಮ್ ಆಗಿರಲಿಲ್ಲ. ಇದೀಗ 4 ಮತ್ತು 5 ಪ್ಲ್ಯಾಟ್ ಫಾರ್ಮ್ ಆಗಿದೆ. ಇದು ಅಭೂತಪೂರ್ವ ಅಭಿವೃದ್ಧಿ ಎಂದು ಹೇಳಿದರು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಶಾಸಕ ಡಾ. ಭಾರತ್ ಶೆಟ್ಟಿ, ಉಪ ಮೇಯರ್ ಸುನೀತ, ಮನಪಾ ಸದಸ್ಯ ವಿನಯ್ ರಾಜ್, ಪಾಲ್ಘಾಟ್ ರೈಲ್ವೆಯ ಡಿಆರ್ ಎಂ ಅರುಣ್ ಕುಮಾರ್ ಚತುರ್ವೇದಿ, ಎಡಿಆರ್ ಎಂ ಜಯಕೃಷ್ಣನ್ ಇದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments