ಜಮ್ಮು & ಕಾಶ್ಮೀರ: ರಣಮಳೆಗೆ ಉತ್ತರ ಭಾರತದ 6 ರಾಜ್ಯಗಳು ಅಕ್ಷರಶಃ ನಲುಗಿ ಹೋಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಸಂಪೂರ್ಣ ತತ್ತರಿಸಿ ಹೋಗಿದೆ. ಜಮ್ಮು ಕಾಶ್ಮೀರದಲ್ಲಿ ಮಹಾ ಮಳೆಯಿಂದ ಹಲವಾರು ಅವಾಂತರಗಳು ಸೃಷ್ಟಿಯಾಗಿದೆ.ಪಠಾಣ್‌ಕೋಟ್-ಜಮ್ಮು ವಿಭಾಗದ ಅನೇಕ ಸ್ಥಳಗಳಲ್ಲಿ ಸಮಸ್ಯೆ ಮತ್ತು ಬಿರುಕುಗಳಿಂದಾಗಿ ಕಳೆದ ಎಂಟು ದಿನಗಳಿಂದ ಜಮ್ಮು ರೈಲ್ವೆ ವಿಭಾಗದಲ್ಲಿ ಟೈಲ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಜಮ್ಮು & ಕಾಶ್ಮೀರದಲ್ಲಿ ಮಳೆಯಿಂದ ಹಲವಾರು ಅವಾಂತರ ಸೃಷ್ಟಿಯಾಗಿದ್ದು 68 ರೈಲುಗಳನ್ನು ರದ್ದು ಮಾಡಲಾಗಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಭಾರತದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಸಹ ಈಶಾನ್ಯ ಭಾರತದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಸೆಪ್ಟೆಂಬರ್ 30 ರವರೆಗೆ ಜಮ್ಮು ಮತ್ತು ಕತ್ರಾ ನಿಲ್ದಾಣಗಳಿಂದ ಬರುವ 68 ಒಳಬರುವ ಮತ್ತು ಹೊರಹೋಗುವ ರೈಲುಗಳನ್ನು ರದ್ದುಗೊಳಿಸಲಾಗಿದೆ ಮತ್ತು 24 ರೈಲುಗಳು ಪುನರಾರಂಭಗೊಳ್ಳಲಿವೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.
ಭಾರೀ ಮಳೆ ಮತ್ತು ಹಠಾತ್ ಪ್ರವಾಹದಿಂದಾಗಿ,ಪಠಾಣ್‌ಕೋಟ್-ಜಮ್ಮು ವಿಭಾಗದ ಅನೇಕ ಸ್ಥಳಗಳಲ್ಲಿ ಸಮಸ್ಯೆ ಮತ್ತು ಬಿರುಕುಗಳಿಂದಾಗಿ ಕಳೆದ ಎಂಟು ದಿನಗಳಿಂದ ಜಮ್ಮು ರೈಲ್ವೆ ವಿಭಾಗದಲ್ಲಿ ಟೈಲ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 26 ರಿಂದ ಜಮ್ಮು ಪ್ರದೇಶದಲ್ಲಿ ಭಾರೀ ಮಳೆಯಾಗಿ ರೈಲು ಮತ್ತು ರಸ್ತೆ ಸಂಚಾರ ತೀವ್ರವಾಗಿ ಅಸ್ತವ್ಯಸ್ತಗೊಂಡಿದ್ದರಿಂದ ಸಾವಿರಾರು ಜನರು, ವಿಶೇಷವಾಗಿ ಯಾತ್ರಿಕರು ಸಿಲುಕಿಕೊಂಡರು.
ಕತ್ರಾದ ಮಾತಾ ವೈಷ್ಣೋದೇವಿ ದೇಗುಲದ ಬಳಿ ಸಂಭವಿಸಿದ ಭೂಕುಸಿತದಲ್ಲಿ 34 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಜಮ್ಮು ಪ್ರದೇಶದಲ್ಲಿ 1910 ರಿಂದೀಚೆಗೆ ಬುಧವಾರದ ವೇಳೆಗೆ 380 ಮಿ.ಮೀ. ಮಳೆಯಾಗಿದ್ದು, ಅತಿ ಹೆಚ್ಚು ಮಳೆಯಾಗಿದ್ದು ಸಿಕ್ಕಿಬಿದ್ದ ಪ್ರಯಾಣಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಈ ಕೆಳಗಿನ ರೈಲು ಸೇವೆಗಳನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.