Wednesday, January 28, 2026
18.8 C
Bengaluru
Google search engine
LIVE
ಮನೆರಾಜಕೀಯಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ರಾಮನಗರ: ರಾಜ್ಯದಲ್ಲಿ ಎಂಇಎಸ್  ಪುಂಡಾಟ ಮುಂದುವರಿದ ಹಿನ್ನೆಲೆ ಎಂಇಎಸ್ ವಿರುದ್ಧ ರಾಮನಗರದಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ.

ರಾಮನಗರದ ಐಜೂರು ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿ ಎಂಇಎಸ್ ನಿಷೇಧ ಮಾಡುವಂತೆ ಪೊರಕೆ ಹಿಡಿದು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ದಿನೇದಿನೇ ಎಂಇಎಸ್ ಪುಂಡಾಟ ಹೆಚ್ಚಾಗಿದೆ. ಬೆಳಗಾವಿಯಲ್ಲಿ ಗ್ರಾ.ಪಂ ಅಧಿಕಾರಿ ಮೇಲೆ ಹಲ್ಲೆ ನಡೆಸಲಾಗಿದೆ. ಕನ್ನಡದಲ್ಲಿ ಪಹಣಿ ಕೊಡಲಿಲ್ಲ ಎಂಬ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂದರೆ ಅವರ ಪುಂಡಾಟಕ್ಕೆ ಮಿತಿ ಇಲ್ಲದಂತಾಗಿದೆ. ಪದೇಪದೇ ಕನ್ನಡಿಗರ ಮೇಲೆ ಹಲ್ಲೆ ನಡೆಸುವ ಕೆಲಸವನ್ನು ಎಂಇಎಸ್ ಪುಂಡರು ಮಾಡುತ್ತಿದ್ದಾರೆ.  ಅದಕ್ಕಾಗಿ ಮಾ.22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈಗಾಗಲೇ ಎರಡು ಸಾವಿರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಅಖಂಡ ಕರ್ನಾಟಕ ಬಂದ್ ಸಂಪೂರ್ಣ ಯಶಸ್ವಿಯಾಗಲಿದೆ. ಎಂಇಎಸ್ ಸಂಪೂರ್ಣ ನಿಷೇಧ ಮಾಡುವಂತೆ ವಾಟಾಳ್ ನಾಗರಾಜ್ ಒತ್ತಾಯ ಮಾಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments