ಗೆಲುವಿನ ವಿಶ್ವಾಸ ವ್ಯಕ್ತಪಡಿಸಿ ಮತದಾನ ಮಾಡಿದ ವೀರಣ್ಣ ಚರಂತಿಮಠ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ನಡುವೆಯೇ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕಾಂಗ್ರೆಸ್ ವಿರುದ್ಧ ಹಣ ಹಂಚಿಕೆಯ ಗಂಭೀರ ಆರೋಪ ಮಾಡಿದ್ದಾರೆ. ಇಂದು ಬೆಳಿಗ್ಗೆ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ನಿನ್ನೆ ರಾತ್ರಿ ಮತದಾರರಿಗೆ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿ ಕ್ಷೇತ್ರದ ವಾತಾವರಣ ಬಿಜೆಪಿಗೆ ಪೂರಕವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಭಿವೃದ್ಧಿ ಮತ್ತು ಜನರ ಬೆಂಬಲದ ಮೇಲೆ ತಮಗೆ ಗೆಲುವು ಖಚಿತ ಎಂಬ ಭರವಸೆ ವ್ಯಕ್ತಪಡಿಸಿದ ಅವರು, ಯುವಕರು, ಹಿರಿಯರು ಸೇರಿದಂತೆ ಪ್ರತಿಯೊಬ್ಬ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಮಲದ ಗುರುತಿಗೆ ಮತ ನೀಡುವ ಮೂಲಕ ತಮಗೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣವು ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಗೆಲುವಿನ ಬಗ್ಗೆ ಅಚಲ ವಿಶ್ವಾಸ ಹೊಂದಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯ ಪರವಾಗಿ ಇದೆ ಎಂದು ಅಭಿಪ್ರಾಯಪಟ್ಟಿರುವ ಅವರು, ತಮಗೆ ಮತದಾರರು ಮಗದೊಮ್ಮೆ ಸೇವೆ ಮಾಡಲು ಅವಕಾಶ ನೀಡುತ್ತಾರೆ.
ವಿಶೇಷವಾಗಿ ಯುವ ಮತದಾರರು ಮತ್ತು ಮಹಿಳೆಯರ ಬೆಂಬಲವು ಬಿಜೆಪಿಯತ್ತ ವಾಲುತ್ತಿದೆ ಎಂಬುದು ಚರಂತಿಮಠ ಅವರ ವಾದವಾಗಿದೆ. ಕ್ಷೇತ್ರದ ಪ್ರತಿ ಹಳ್ಳಿಯಲ್ಲೂ ಜನರು ಬದಲಾವಣೆ ಬಯಸುತ್ತಿದ್ದಾರೆ ಮತ್ತು ಅಭಿವೃದ್ಧಿ ಕೆಲಸಗಳನ್ನು ಗುರುತಿಸಿ ಕಮಲದ ಗುರುತಿಗೆ ಮತ ಹಾಕಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮತದಾನದ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೊರಬಂದು ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸುವಂತೆ ಕರೆ ನೀಡಿರುವ ಅವರು, ಈ ಉಪಚುನಾವಣೆಯ ಫಲಿತಾಂಶವು ರಾಜ್ಯ ರಾಜಕಾರಣಕ್ಕೆ ಹೊಸ ದಿಕ್ಸೂಚಿಯಾಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಬಾಗಲಕೋಟೆಯ ಜನರು ನೀಡುವ ತೀರ್ಪು ಈ ಬಾರಿ ಯಾರ ಪರವಾಗಿ ಇರಲಿದೆ ಎಂಬುದು ಮೇ 4 ರಂದು ಹೊರಬೀಳುವ ಫಲಿತಾಂಶದಿಂದ ಸ್ಪಷ್ಟವಾಗಲಿದೆ.




