ಚನ್ನರಾಯಪಟ್ಟಣ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಮತ್ತು ಹಿರಿಯ ಪತ್ರಕರ್ತ ಹೇಮಕುಮಾರ್(56) ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.
ಜ್ಞಾನದೀಪ, ನಾಡಸಹ್ಯಾದ್ರಿ ದಿನಪತ್ರಿಕೆ ಸೇರಿದಂತೆ ಹಲವು ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ಮೃತರು ಪತ್ನಿ, ಪುತ್ರಿ ಸೇರಿದಂತೆ ಬಂದು ಬಳಗವನ್ನು ಅಗಲಿದ್ದಾರೆ. ಕಳೆದ ಭಾನುವಾರ ಮಿದುಳಿನಲ್ಲಿ ರಕ್ತಸ್ರಾವವಾಗಿ ಅಸ್ವಸ್ಥರಾಗಿದ್ದ ಅವರಿಗೆ ಶಸ್ರ್ರಕ್ರಿಯೆ ನಡೆದಿತ್ತು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಚನ್ನರಾಯಪಟ್ಟಣದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಲಿದೆ.
ಕೆಯುಡಬ್ಲ್ಯೂಜೆ ಸಂತಾಪ:
ಚನ್ನರಾಯಪಟ್ಟಣ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಮತ್ತು ಹಿರಿಯ ಪತ್ರಕರ್ತ ಹೇಮಕುಮಾರ್ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.
ಸ್ನೇಹಮಯಿಯಾಗಿದ್ದ ಹೇಮಕುಮಾರ್ ನಿಧನ ನೋವಿನ ಸಂಗತಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.
ಫ್ರೀಡಂ ಟಿವಿಯಲ್ಲಿ ಜಾಹೀರಾತು ನೀಡಲು
ಈ ನಂಬರ್ ಗೆ ಸಂಪರ್ಕಿಸಿ
Phone Number : +91 9164072277
Email id : salesatfreedomtv@gmail.com