Wednesday, April 30, 2025
29.2 C
Bengaluru
LIVE
ಮನೆ#Exclusive NewsTop Newsಉಪರಾಷ್ಟ್ರಪತಿ ಜಗದೀಪ್ ಧನ್​ಖರ್​ಗೆ ಎದೆನೋವು; ಏಮ್ಸ್ ಆಸ್ಪತ್ರೆಗೆ ದಾಖಲು

ಉಪರಾಷ್ಟ್ರಪತಿ ಜಗದೀಪ್ ಧನ್​ಖರ್​ಗೆ ಎದೆನೋವು; ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್​ ಧನ್​ಖರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಸ್ತುತ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ ನಲ್ಲಿ ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದಲ್ಲಿ ಜಗದೀಪ್ ಧನ್​ಖರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವರದಿ ತಿಳಿಸಿದೆ. ಉಪರಾಷ್ಟ್ರಪತಿ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments