Sunday, December 7, 2025
25.5 C
Bengaluru
Google search engine
LIVE
ಮನೆಜಿಲ್ಲೆಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ; ಬೆಲ್ಲದ್​ ಹೊಸ ಬಾಂಬ್​

ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ; ಬೆಲ್ಲದ್​ ಹೊಸ ಬಾಂಬ್​

ಹುಬ್ಬಳ್ಳಿ: ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ. ಶ್ರೀಗಳ ಆಹಾರವನ್ನು ವಿಷ ಮಾಡಿ ಅವರನ್ನು ಮುಗಿಸಬೇಕು ಅಂತ ಯೋಚನೆ ಮಾಡಿದ್ದಾರೆ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ್  ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಗಳ ಆರೋಗ್ಯ ಹದಗೆಟ್ಟಿತ್ತು. ಅವರಿಗೆ ಫುಡ್​ ಪಾಯಿಸನ್​ ಆಗಿದೆ ಅಂತ ಗೊತ್ತಿತ್ತು ಎಂದು ಹೇಳಿದ್ದಾರೆ.

ಮಠದ ಹೊರಗಡೆ ಇಬ್ಬರು ಮುಸ್ಲಿಂ ಸಮಾಜದ ಹುಡುಗರು ಇದ್ದಾರೆ. ಆ ಇಬ್ಬರು ಮಠಕ್ಕೆ ಯಾರು ಬರ್ತಾರೆ ಹೋಗುತ್ತಾರೆ  ಅಂತ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ವಿಡಿಯೋ ಸಹ ಮಾಡಿಕೊಳ್ಳುತ್ತಿದ್ದಾರೆ ಅಂತ ಭಕ್ತರು ನನಗೆ ಹೇಳಿದ್ದಾರೆ. ಅದೇ ಮುಸ್ಲಿಂ ಯುವಕರು ಅಡುಗೆ ಮನೆಗೆ ಹೋಗಿದ್ದರು. ಈ ಬಗ್ಗೆ ಸ್ಥಳೀಯರು ಯವಕರನ್ನು ವಿಚಾರಣೆ ಮಾಡಿದ್ದಾರೆ. ಆ ಯುವಕರು ಅಡುಗೆ ಮನೆಗೆ ಹೋಗಿ ಬಂದ ಕೆಲವೇ ಹೊತ್ತಿನಲ್ಲಿ ಶ್ರೀಗಳ ಆರೋಗ್ಯ ಹದಗೆಟ್ಟಿದೆ. ಈ ಬಗ್ಗೆ ಶ್ರೀಗಳು ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದ್ರು.

ನನಗೆ ಮನಸ್ಸಿಗೆ ಸರಿಯಾಗುತ್ತಿಲ್ಲ, ನನಗೆ ವಿಷ ಪ್ರಾಶನ ಆಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ. ಊಟದ ಏನೋ ಹೆಚ್ಚು ಕಡಿಮೆ ಹಾಕಲಾಗಿದೆ ಅಂತ ಅನುಮಾನ ವ್ಯಕ್ತಪಡಿಸಿದ್ದಾರೆ  ಎಂದ್ರು

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments