ರಾಜಕೀಯ

ಇಂದಿನಿಂದ ವಿಧಾನಸೌಧ ನಿತ್ಯ ಜಗಮಗ

ಬೆಂಗಳೂರು: ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಹಿಂದೆಲ್ಲ ರಾಷ್ಟ್ರೀಯ ಹಬ್ಬಗಳು, ವಿಶೇಷ ಸಂದರ್ಭಗಳಲ್ಲಿ ಮಾತ್ರ ವಿಧಾನ ಸೌಧಕ್ಕೆ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿತ್ತು. ಆದ್ರೆ ಇಂದಿನಿಂದ ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರತಿ ಶನಿವಾರ ಮತ್ತು ಭಾನುವಾರ ವರ್ಣರಂಜಿತ ವಿದ್ಯುತ್​​​​ ದೀಪಗಳಿಂದ ‌ವಿಧಾನಸೌಧ ಗೊಳಿಸಲಿದೆ.

ವಿಧಾನಸೌಧಕ್ಕೆ ಶಾಶ್ವತ ದೀಪಾಲಂಕಾರ ಉದ್ಘಾಟಿಸಿ ಮಾತನಾಡಿದ ಸಿಎಂ, ಸಂಸತ್ತು, ವಿಧಾನಸೌಧ ಜನರ ಮತ್ತು ರಾಜ್ಯದ ಹಾಗೂ ದೇಶದ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ದೇಗುಲಗಳು. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವ ಮಾತನ್ನು ಪ್ರತಿಯೊಬ್ಬರೂ ಸಾರ್ಥಕಗೊಳಿಸುವ ರೀತಿಯಲ್ಲಿ ಕೆಲಸ ಮಾಡಿ ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಬೇಕು ಎಂದು ಕರೆ ನೀಡಿದರು.

Comments (0)

Your email address will not be published. Required fields are marked *

Back to top button