ವಿಜಯಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ನಟ ಹಾಗೂ ಡಿಎಂಕೆ ಮುಖ್ಯಸ್ಥ ವಿಜಯಕಾಂತ್ ಅವರು 71ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ವಿಜಯಕಾಂತ್ ಅವರನ್ನು ವೆಂಟಿಲೇಟರ್ ಸಹಾಯದಲ್ಲಿ ಇಡಲಾಗಿತ್ತು. ಆದರೆ ಎಚ್ಟೇ ಪ್ರಯತ್ನಿಸಿದರೂ ಅವರನ್ನು ಬದುಕಿಸಲು ಸಅಧ್ಯವಾಗಲಿಲ್ಲ. ಡಿಸೆಂಬರ್ 28ರ ಬೆಳಿಗ್ಗೆ ಅವರು ನಿಧನ ಹೊಂದಿದರು ಎಂದು ಆಸ್ಪತ್ರೆಯವರು ತಿಳಿಸಿದ್ದಾರೆ.
ವಿಜಯಕಾಂತ್ ಅವರನ್ನು ಮಂಗಳವಾರ ಸಾಮನ್ಯ ಪರೀಕ್ಷೇಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವಿಜಯ್ ಅವರು ಆರೋಗ್ಯವಾಗಿದ್ದಾರೆ. ಇದೊಂದು ಸಾಮಾನ್ಯ ಪರೀಕ್ಷೇ. ಅವರು ಶೀಘ್ರವೇ ಮನೆಗೆ ಮರಳಿದ್ದಾಋಎ ಎಂದು ಡಿಎಂಡಿಕೆ ಪಕ್ಷದವರು ಹೇಳಿದ್ದರು. ಆ ಬಳಿಕ ಅವರಿಗೆ ಕೊವಿಡ್ ಇರುವ ವಿಚಾರ ದೃಢವಾಯಿತು. ಅವರ ಸಾವಿನ ಸುದ್ದಿ ಪಕ್ಷದವರಿಗೆ ಹಾಗೂ ಅಭಿಮಾನಿಗಳಿಗೆ ಶಾಕ್ ನೀಡಿದೆ. ಈ ಮೊದಲು ನವೆಂಬರ್ 20ರಂದು ವಿಜಯ್ಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು.
ವಿಜಯ್ಕಾಂತ್ ಅವರು 1952ರಲ್ಲಿ ಮದುರೈನಲ್ಲಿ ಜನಿಸಿದರು. ಅವರು 80ರ ದಶಕದಲ್ಲಿ ರಂಗಕ್ಕೆ ಬಂದರು. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2009ರ ಈಚೆಗೆ ಚಿತ್ರರಂಗದಿಂದ ದೂರ ಆಗಿ ರಾಜಕೀಯದಲ್ಲಿ ತೊಡಗಿಕೊಂಡಿದ್ದರು. ಪ್ರೇಮಲತಾ ಅವರನ್ನು ವಿಜಯಕಾತ್ 1990ರಲ್ಲಿ ಮದುವೆ ಮಾಡಿಕೊಂಡರು.
2005ರಲ್ಲಿ ವಿಗಯಕಾಂತ್ ಅವರು ಡಿಎಂಡಿಕೆಯನ್ನು ಸ್ಥಾಪಿಸಿದರು. ಚೆನ್ನೈನಲ್ಲಿ ಈ ಪಕ್ಷದ ಮುಖ್ಯ ಕಚೇರಿ ಇದೆ. ಆ ಬಳಿಕ ಅವರು ಸಿನಿಮಾ ಕಡೆ ಹೆಚ್ಚು ಒಲವು ತೋರಿಸಲಿಲ್ಲ. ಅವರು ಎರಡು ಬಾರಿ ವಿಧಾನಸಭಾ ಸದಸ್ಯರಾಗಿದ್ದರು. 2011ರಿಂದ 2016ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿದ್ದರು. ಅವರ ಆರೋಗ್ಯ ಇತ್ತೀಚೆಗೆ ಹದಗೆಟ್ಟಿದ್ದರಿಂದ ರಾಜಕೀಯದಲ್ಲೂ ಆ್ಯಕ್ವೀವ್ ಆಗಿರಲಿಲ್ಲ.