ವಿಜಯನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯಸಭಾ ಸದಸ್ಯರಾಗಿ ಗೆದ್ದ ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಕೂಗು ಕೇಳಿ ಬಂದಿರುತ್ತದೆ. ಭಾರತ ದೇಶದಲ್ಲಿ ಇದ್ದು ಪಾಕಿಸ್ತಾನದ ಪರ ಘೋಷಣೆ ಕೂಗುವ ಕಾಂಗ್ರೇಸ್ ಮುಖಂಡರ ಧೋರಣೆಯನ್ನು ವಿರೋಧಿಸುವ ಇಂದು ನೂತನ ಜಿಲ್ಲೆಯಾದ ವಿಜಯನಗರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಶಾನಭಾಗ್ ವೃತದಿಂದ ಪ್ರಾರಂಭವಾದ ಪ್ರತಿಭಟನೆಯು, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಫರ್-ವೇಜ್ ಪ್ಲಾಜ್ ಮುತ್ತಿಗೆ ಹಾಕಲು ಪ್ರಯತ್ನಿಸಿದರು.ಈ ಸಂದರ್ಭದಲ್ಲಿ ಪೋಲೀಸರು ಪ್ರತಿಭಟನಾಕಾರರನ್ನು ತಡೆಯುವಲ್ಲಿ ಯಶಸ್ವಿಯಾದರು.ಪಾಕಿಸ್ತಾನ್ ಜಿಂದಾಬಾದ್ ಎಂಬ ಹೇಳಿಕೆಯ ಕೂಗುವ ಮೂಲಕ ಕಾಂಗ್ರೇಸ್ ಪಕ್ಷ ತನ್ನ ನಿಜಬಣ್ಣ ಏನು ಎನ್ನುವುದನ್ನು ತೋರಿಸಿದೆ ಬಿಜೆಪಿ ಮುಖಂಡರು ಆಕ್ರೋಶ ಹೊರ ಹಾಕಿದರು.