Thursday, May 1, 2025
28.8 C
Bengaluru
LIVE
ಮನೆಜಿಲ್ಲೆVijayapura | ವಿಜಯಪುರದ ಶ್ರೀ ಸಿದ್ಧೇಶ್ವರ ಜಾತ್ರೆ ವಿಚಾರದಲ್ಲಿ ಧರ್ಮ ದಂಗಲ್

Vijayapura | ವಿಜಯಪುರದ ಶ್ರೀ ಸಿದ್ಧೇಶ್ವರ ಜಾತ್ರೆ ವಿಚಾರದಲ್ಲಿ ಧರ್ಮ ದಂಗಲ್

ವಿಜಯಪುರ : ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದೆಂದು ಶ್ರೀರಾಮ ಸೇನೆ ಹಾಗೂ ಇತರೆ ಹಿಂದೂ ಪರ ಸಂಘಟನೆಗಳು ಒತ್ತಾಯಿಸಿದ್ದಾರೆ.

ಶ್ರೀ ಸಿದ್ದೇಶ್ವರ ಜಾತ್ರೆಯು ಜನವರಿಯಲ್ಲಿ ಒಂದು ವಾರ ನಡೆಯುವ ಐತಿಹಾಸಿಕ ಸುಪ್ರಸಿದ್ದ ಜಾತ್ರೆಯಾಗಿದೆ. ಸಿದ್ದೇಶ್ವರ ಸಂಸ್ಥೆಯ ನೇತೃತ್ವದಲ್ಲಿ ಈ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರೆಯಲ್ಲಿ ಅನ್ಯಕೋಮಿನವರಿಗೆ ವ್ಯಾಪಾರ ಮಾಡಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಶ್ರೀರಾಮ ಸೇನೆ ಹಾಗೂ ಇತರ ಹಿಂದೂ ಪರ ಸಂಘಟನೆಗಳಿಂದ ಸಿದ್ದೇಶ್ವರ ಸಂಸ್ಥೆ ಅಧ್ಯಕ್ಷರಾಗಿರೋ ಶಾಸಕ ಯತ್ನಾಳ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹಿಂದೂಗಳ ದೇವಸ್ಥಾನ ಜಾತ್ರೆಗಳಲ್ಲಿ ವ್ಯಾಪಾರ ವಹಿವಾಟು ನಡೆಸಲು ನಿರ್ಬಂಧಿಸಲು ಮನವಿ ಮಾಡಿದ್ದಾರೆ. ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ‌ ಮಹಾಸಂಘ, ಹಿಂದೂ ಜನ ಜಾಗೃತಿ ಸಂಘದ ನಿರ್ಣಯ ಪ್ರಸ್ತಾಪಿಸಿದ್ದು, ಜಾತ್ರೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದರೆ ಉಗ್ರ ಹೋರಾಟ ಮಾಡುವಂತೆ ಎಚ್ಚರಿಕೆ ನೀಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments