ವಿಜಯಪುರ : ವಿಜಯಪುರ ನಗರದ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗದ್ದುಗೆ ದರ್ಶನ ಮಾಡಿದ ಬಳಿಕ ಮಾತನಾಡಿದ ಅವರು, ಗೋಧ್ರಾದಂಥ ಘಟನೆ ಮತ್ತೆ ನಡೆಯಬಹುದು ಎಂಬ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಂತಹ ಘಟನೆ ನಡೆಯುವ ಬಗ್ಗೆ ಸುಳಿವು ಇದ್ದರೆ ಪೊಲೀಸ್ ಇಲಾಖೆಗೆ ಹೋಗಿ ಯಾಕೆ ಮಾಹಿತಿ ನೀಡ್ತೀಲ್ಲ..? ಇವರು ಯಾರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ವಿಧ್ವಂಸಕ ಕೃತ್ಯ ಮಾಡಲು ಹೊರಟಿರುವವರ ಬಗ್ಗೆ ಕೇಳಿದರೆ ಹೇಳುತ್ತೇನೆ ಎಂಬ ಹೇಳಿಕೆ ಸರಿಯಲ್ಲ. ಹಾಗೆ ಹೇಳುವುದು ವಿಧ್ವಂಸಕ ಕೃತ್ಯ ನಡೆಯಲಿ ಎಂಬ ಅರ್ಥ ಕೊಡುತ್ತದೆ. ಹಾಗಾದರೆ ಇವರು ಪ್ರಜರಗಳನ್ನು ರಕ್ಷಣೆ ಮಾಡ್ತಿದ್ದಾರೋ ಅಥವಾ ವಿಧ್ವಂಸಕ ಕೃತ್ಯಗಳನ್ನ ಮಾಡುವವರನ್ನು ರಕ್ಷಣೆ ಮಾಡುತ್ತಿದ್ದಾರೋ..? ಜವಾಬ್ದಾರಿ ಸ್ಥಾನದಲ್ಲಿರುವವರು ಇಂಥ ಮಾತನ್ನಾಡಬಾರದು, ಹಾಗಾದ್ರೆ ಇಲ್ಲಿ ಭಯೋತ್ಪಾದಕರು ಆಗಿದ್ದು ಯಾರು ಎಂದು ಪೇಜಾವರ ಶ್ರೀ ಪ್ರಶ್ನಿಸಿದರು.
ಹೀಗೆ ಮಾತನಾಡುವ ಇವರೇ ಭಯೋತ್ಪಾದಕರು . ರಾಮ ಭಕ್ತರನ್ನು ಹೆದರಿಸುವ ಭರದಲ್ಲಿ ದೇಶವನ್ನೇ ಹೆದರಿಸುತ್ತಿದ್ದಾರೆ. ಈ ರೀತಿ ಯಾರು ಕೂಡ ಮಾತನಾಡಬಾರದು. ಕೃತ್ಯಗಳ ಮಾಹಿತಿ ಇದ್ದರೆ ಅದನ್ನು ಪರಿಹರಿಸುವ ಕೆಲಸ ಮಾಡಬೇಕು ಎಂದು ಪೇಜಾವರ ಸ್ವಾಮೀಜಿ ಹೇಳಿದರು.
ಬಿಜೆಪಿ ಆರ್ಎಸ್ಎಸ್ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಉಡುಪಿ ಪೇ ಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿರುಗೇಟು ನೀಡಿದ್ದಾರೆ. ಭಾರತವನ್ನು ಹಿಂದೂರಾಷ್ಟ್ರ ಮಾಡಿದರೆ ಪಾಕಿಸ್ತಾನ ಮಾಡಲು ಯಾರೋ ಸಿದ್ಧತೆ ನಡೆಸುತ್ತಿದ್ದಾರೋ ಏನೋ.. ಅಂತಹ ಸಿದ್ದತೆ ಇಲ್ಲಿ ನಡೆಯುತ್ತಿದೆ. ಎಂಬುದರ ಮುನ್ಸೂಚನೆ ಕೊಡುತ್ತಿದ್ದಾರೆ ಅವರು. ಅವರ ಹೇಳಿಕೆ ಸರಿಯಲ್ಲ. ಭಾರತ ಹಿಂದಿನಿಂದಲೂ ಹಿಂದೂ ರಾಷ್ಟ್ರವಾಗಿ ಇದ್ದು, ಜಾತಿ ಧರ್ಮ ಪಂಗಡ ಎಂದು ಮೀಸಲಿರದೆ ಎಲ್ಲರನ್ನು ಅಪ್ಪಿ ಒಪ್ಪಿಕೊಂಡ ದೇಶ ಎಂದು ಶ್ರೀಗಳು ಹೇಳಿದರು.


