ಮಂಡ್ಯ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಚೌಡಸಮುದ್ರದಲ್ಲಿ ನಡೆದಿದೆ.
ಪ್ರಸನ್ನ ಎನ್ನುವವರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಹಲವು ಬಾರಿ ಗ್ರಾಮದಲ್ಲೇ ಅಕ್ರಮ ಮದ್ಯ ಮಾರಾಟದ ಬಗ್ಗೆಅಬಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿಲಾಗಿದೆ. ಆದ್ರೂ ಕೂಡ ಅಕ್ರಮ ಮದ್ಯ ಮಾರಾಟ ಮಾತ್ರ ನಿಂತಿಲ್ಲ. ಅಬಕಾರಿ ಅಧಿಕಾರಿಗಳ ಕುಮ್ಮಕ್ಕಿನಿಂದಲೇ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.
ಅಕ್ರಮ ಮದ್ಯ ಮಾರಾಟದಿಂದ ಗ್ರಾಮದ ಕೆಲವು ಜನರು ದಾಸರಾಗಿ ಗ್ರಾಮದಲ್ಲಿ ಅಶಾಂತಿಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಆದ್ರೆ ಅಕ್ರಮ ಮಾರಾಟ ಮಾಡುತ್ತಿದ್ದ ವ್ಯಕ್ತಿ ಮಾತ್ರ, ನೀವು ಪ್ರತಿಭಟನೆ ಮಾಡಿ ನನಗೆ ಡಿಸಿ, ತಹಸಿಲ್ದಾರ್ ಅಧಿಕಾರಿಗಳು ಗೊತ್ತು ಎಂದು ಅವಾಜ್ ಹಾಕಿದ್ದಾನೆ. ನಾನು ಮದ್ಯ ಮಾರಾಟ ಮಾಡುತ್ತಿಲ್ಲ. ನನ್ನ ಜಮೀನು ಕೆಲಸಕ್ಕೆ ಬರುವ ಕಾರ್ಮಿಕರಿಗೆ ಮದ್ಯ ಕೊಡುತ್ತಿದ್ದೇನೆ ಎಂದು ಉಡಾಫೆ ಉತ್ತರ ನೀಡಿದ್ದಾನೆ.
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು, ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಜಿಲ್ಲಾ ಪಂಚಾಯಿತಿ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.


