ರಾಜಕೀಯ

ಯೋಗೇಶ್ ಗೌಡ ಕೊಲೆ ಕೇಸ್ – ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು!

Yogesh Gowda murder case - Ex-minister Vinay Kulkarni granted bail!

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು, ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದೆ.

ಹೈಕೋರ್ಟ್ ವಿಭಾಗೀಯ ಪೀಠವು ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಚನ್ನಕೇಶ ಟಿಂಗರಿಕರ್ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ಜಾಮೀನು ನೀಡಿದೆ. ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಘೋಷಿಸಿದ್ದ ತೀರ್ಪಿಗೂ ಹೈಕೋರ್ಟ್ ತಡೆ ನೀಡಿದೆ.

ಜಾಮೀನು ಪಡೆದ ಆರೋಪಿಗಳು 5 ಲಕ್ಷ ರೂಪಾಯಿಗಳ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಲಯ ಸೂಚಿಸಿದೆ. ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ಯಾವುದೇ ಆರೋಪಿಗಳು ದೇಶ ಬಿಟ್ಟು ತೆರಳುವಂತಿಲ್ಲ ಎಂದು ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ. ಬಸವರಾಜ ಅವರಿದ್ದ ವಿಭಾಗೀಯ ಪೀಠವು ನಡೆಸಿತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.

Comments (0)

Your email address will not be published. Required fields are marked *

Back to top button