ದೇಶ/ವಿದೇಶರಾಜಕೀಯಸುದ್ದಿ

ರಾಷ್ಟ್ರಪತಿ ಶಿಷ್ಟಾಚಾರ ಉಲ್ಲಂಘನೆ; ಮಮತಾ ಸರ್ಕಾರಕ್ಕೆ ಕೇಂದ್ರದ ಶಾಕ್!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಹೊಸ ಸಂಕಷ್ಟ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಕೇಂದ್ರ ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ದೇಶದ ಪ್ರಥಮ ಪ್ರಜೆಯ ಸ್ವಾಗತ ಕೋರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬುದು ಈ ವಿವಾದದ ಕೇಂದ್ರಬಿಂದುವಾಗಿದೆ.

ರಾಷ್ಟ್ರಪತಿಗಳು ರಾಜ್ಯಕ್ಕೆ ಬಂದಾಗ ಅವರನ್ನು ಸ್ವಾಗತಿಸಲು ಮುಖ್ಯಮಂತ್ರಿಗಳಾಗಲಿ ಅಥವಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು ಹಾಜರಿರಲಿಲ್ಲ ಎಂಬುದು ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿದೆ. ನಿಯಮದ ಪ್ರಕಾರ ಇವರೆಲ್ಲರೂ ಹಾಜರಿರಬೇಕಾದ್ದು ಕಡ್ಡಾಯವಾಗಿದ್ದು, ಕೇವಲ ಸಿಲಿಗುರಿ ಮೇಯರ್ ಮಾತ್ರ ಸ್ವಾಗತಕ್ಕೆ ಬಂದಿರುವುದು ‘ಬ್ಲೂ-ಬುಕ್’ ನಿಯಮಗಳ ಗಂಭೀರ ಉಲ್ಲಂಘನೆ ಎಂದು ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಘಟನೆಯು ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವಿನ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸಿದೆ. ಶಿಷ್ಟಾಚಾರ ಉಲ್ಲಂಘನೆ ಕುರಿತು ಕೇಂದ್ರ ಗೃಹ ಕಾರ್ಯದರ್ಶಿಯವರು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ಬಗ್ಗೆ ಕೂಡಲೇ ವಿವರಣೆ ನೀಡುವಂತೆ ಗೃಹ ಸಚಿವಾಲಯ ಸೂಚಿಸಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಮುಂದಿನ ನಡೆ ಏನು ಎಂಬುದು ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

Comments (0)

Your email address will not be published. Required fields are marked *

Back to top button