ಬ್ರಾಂಪ್ಟನ್: ಬ್ರಾಂಪ್ಟನ್ನ ಹಿಂದೂ ಸಭಾ ಮಂದಿರದಲ್ಲಿ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕೆನಡಾ ಪೊಲೀಸರು ಮತ್ತೋರ್ವ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಪೀಲ್ ಪ್ರಾದೇಶಿಕ ಪೊಲೀಸರ ಹೇಳಿಕೆಯ ಪ್ರಕಾರ, ಕ್ರಿಮಿನಲ್ ಇನ್ವೆಸ್ಟಿಗೇಶನ್ಸ್ ಬ್ಯೂರೋದ ತನಿಖಾಧಿಕಾರಿಗಳು ಬ್ರಾಂಪ್ಟನ್ನ ದೇವಸ್ಥಾನದಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 35 ವರ್ಷದ ಇಂದರ್ ಜೀತ್ ಗೋಸಲ್ ಎಂಬಾತನನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಈತನ ಬಂಧನ ಬೆನ್ನಲ್ಲೇ ಸಮಾರಂಭವೊಂದರಲ್ಲಿ ಖಲಿಸ್ತಾನಿ ಧ್ವಜವನ್ನು ಹಿಡಿದು ಭಾರತೀಯ ತ್ರಿವರ್ಣ ಧ್ವಜದ ಮೇಲೆ ನಿಂತಿರುವ ಇಂದರ್ಜೀತ್ ಫೋಟೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.
ಈತ ಕೆನಡಾದಲ್ಲಿ ಸಿಖ್ಸ್ ಫಾರ್ ಜಸ್ಟಿಸ್ಸಂ ಘಟನೆಯ ಸಂಯೋಜಕನಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.