Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಬಾಲ್ಯದ ಕೋಚ್

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಬಾಲ್ಯದ ಕೋಚ್

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದರು. ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಕೊಹ್ಲಿ, ಇದು ನನ್ನ ಕೊನೆಯ ಟಿ20 ವಿಶ್ವಕಪ್. ಯುವ ಆಟಗಾರರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಈ ಸ್ವರೂಪಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದು ತಿಳಿಸಿದ್ದರು.

ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಶೀಘ್ರದಲ್ಲೇ ಎಲ್ಲಾ ಮಾದರಿಯ ಕ್ರಿಕೆಟ್​ಗೂ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದರಲ್ಲೂ ಚಾಂಪಿಯನ್ಸ್ ಟ್ರೋಫಿ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಬಳಿಕ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು.

ಈ ಬಗ್ಗೆ ಇದೀಗ ವಿರಾಟ್ ಕೊಹ್ಲಿ ಅವರ ಬಾಲ್ಯದ ಕೋಚ್ ರಾಜ್‌ಕುಮಾರ್ ಶರ್ಮಾ ಸ್ಪಷ್ಟನೆ ನೀಡಿದ್ದಾರೆ. ಕಿಂಗ್ ಕೊಹ್ಲಿ ಇನ್ನೂ ಹಲವು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಟೀಮ್ ಇಂಡಿಯಾ ಭಾರತಕ್ಕೆ ಆಗಮಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ತಮ್ಮ ಬಾಲ್ಯದ ಕೋಚ್ ಅನ್ನು ಭೇಟಿಯಾಗಿದ್ದರು. ಈ ವೇಳೆ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಇದೇ ವೇಳೆ ರಾಜ್​ಕುಮಾರ್ ಶರ್ಮಾ ವಿದಾಯದ ಬಗ್ಗೆ ಕೂಡ ಮಾತನಾಡಿದ್ದಾರೆ.

ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಗೆದ್ದಿರುವುದು ಖುಷಿಯ ವಿಚಾರ. ನಾನು ವಿರಾಟ್ ಜೊತೆ ಮಾತನಾಡಿದ್ದೇನೆ. ಅವರು ಮುಂದಿನ ಹಲವು ವರ್ಷಗಳವರೆಗೆ ಭಾರತದ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಇನ್ನೂ ಕೆಲ ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಆಡುಂವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ರಾಜ್​ಕುಮಾರ್ ಶರ್ಮಾ ತಿಳಿಸಿದ್ದಾರೆ.

ಇದರೊಂದಿಗೆ 2025 ರಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸುವುದಿಲ್ಲ ಎಂಬುದು ಖಚಿತವಾಗಿದೆ. ಅಲ್ಲದೆ ಸದ್ಯ ಟಿ20 ಅಂತಾರಾಷ್ಟ್ರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಕಾರಣ ಒಂದಷ್ಟು ವರ್ಷಗಳ ಕಾಲ ಏಕದಿನ ಮತ್ತು ಟೆಸ್ಟ್ ಸ್ವರೂಪಗಳಲ್ಲಿ ಮುಂದುವರೆಯುವುದನ್ನು ಎದುರು ನೋಡಬಹುದು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments