ಬೆಂಗಳೂರು: ಖಾಸಗಿ ಹೋಟೆಲ್ನಲ್ಲಿ ಬುಧವಾರ ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಪಾಲ್ಗೊಂಡರು. ಸಚಿವ ಡಾ ಎಂ.ಸಿ.ಸುಧಾಕರ್, ಶಾಸಕ ಶರತ್ ಬಚ್ಚೇಗೌಡ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಡಿಸಿಎಂ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್ ಒಟ್ಟಿಗೆ ಊಟ ಮಾಡಿದರು.