Thursday, November 20, 2025
19.1 C
Bengaluru
Google search engine
LIVE
ಮನೆರಾಜಕೀಯವಕ್ಫ್​ ಬಿಲ್​ ಮಂಡನೆ; ಹೋರಾಟಕ್ಕೆ ಸಂದ ಜಯ

ವಕ್ಫ್​ ಬಿಲ್​ ಮಂಡನೆ; ಹೋರಾಟಕ್ಕೆ ಸಂದ ಜಯ

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅಂಗೀಕಾರಗೊಂಡಿರುವ ವಕ್ಫ್ ತಿದ್ದುಪಡಿ ಮಸೂದೆಯು ವಕ್ಫ್ ಬೋರ್ಡ್‌ನ ನಿರಂಕುಶ ನಡೆಗಳಿಗೆ ಕಡಿವಾಣ ಹಾಕಲಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ವಕ್ಫ್ ಕಾಯ್ದೆಯ ತಿದ್ದುಪಡಿಗೆ ಗೆ ಜಂಟಿ ಸಂಸತ್ ಸಮಿತಿ ರಚಿಸಿ ತಿದ್ದುಪಡಿಗೆ ಸೂಚಿಸಿದ ಕೇಂದ್ರ ಸರ್ಕಾರಕ್ಕೂ, ಜೆ.ಪಿ.ಸಿ ಅಧ್ಯಕ್ಷರಿಗೂ, ಸದಸ್ಯರಿಗೂ ಸೇರಿದಂತೆ ತಿದ್ದುಪಡಿಗೆ ಕಾರಣೀಭೂತರಾದ ಎಲ್ಲರಿಗೂ ನನ್ನ ಅನಂತ ಧನ್ಯವಾದಗಳು.

ತಿದ್ದುಪಡಿಯಿಂದ ರೈತರಿಗೆ, ಮಠಗಳಿಗೆ, ದೇವಸ್ಥಾನಗಳಿಗೆ, ಸರ್ಕಾರಿ ಭೂಮಿ ಹಾಗೂ ಜನ ಸಾಮಾನ್ಯರ ಭೂಮಿಯನ್ನು ವಕ್ಫ್ ಎಂದು ಘೋಷಿಸಲು ಸಾಧ್ಯವಿಲ್ಲ ಹಾಗೂ ಜಿಲ್ಲಾಡಳಿತ ಮತ್ತು ನ್ಯಾಯಾಲಯಗಳಷ್ಟೇ ಇದನ್ನು ತೀರ್ಮಾನಿಸಬಹುದು. ನಮ್ಮ ಸಾಮೂಹಿಕ ಹೋರಾಟಕ್ಕೆ ಜಯ ಸಂದಿರುವುದು ಸಾಕಷ್ಟು ಸಂತಸ ತಂದಿದೆ.

ವಿಜಯಪುರದಲ್ಲಿ ನಮ್ಮ ತಂಡದಿಂದ ಮೊಳಗಿದ ಹೋರಾಟ ರಾಷ್ಟ್ರವ್ಯಾಪಿ ಹರಡಿದ್ದು ಸ್ಮರಿಸಬಹುದು.

ಈ ಹೋರಾಟದಲ್ಲಿ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಭಾಗವಹಿಸಿ ಬೆಂಬಲ, ಪ್ರೋತ್ಸಾಹ ನೀಡಿದ ಎಲ್ಲ ನಾಯಕರಿಗೆ, ಮಠಾಧೀಶರಿಗೆ, ಜನಸಾಮಾನ್ಯರಿಗೆ, ವಿಜಯಪುರದಲ್ಲಿ ಧರಣಿ ಮಾಡುತ್ತಿರುವಾಗ ದೂರ-ದೂರುಗಳಿಂದ ರೊಟ್ಟಿ ಊಟ ಕೊಟ್ಟ ಅನ್ನದಾತರಿಗೆ, ಹೆಬ್ಬಂಡೆಯಂತೆ ನಿಂತ ನಮ್ಮ ತಂಡದ ಸದಸ್ಯರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ, ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯವಾಗಿದೆ ಎಂದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments