Top Newsದೇಶ/ವಿದೇಶಸುದ್ದಿ

ಪಾಕ್-ಅಫ್ಘಾನ್ ಗಡಿಯಲ್ಲಿ ಯುದ್ಧದ ಕಾರ್ಮೋಡ; ಪಾಕಿಸ್ತಾನದ ಬೆನ್ನಿಗೆ ನಿಂತ ಡೊನಾಲ್ಡ್ ಟ್ರಂಪ್!

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷವು ಈಗ ಯುದ್ಧದ ಭೀತಿಯನ್ನು ಹುಟ್ಟುಹಾಕಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇತ್ತೀಚೆಗೆ ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಭೀಕರ ದಾಳಿಯಲ್ಲಿ ಸುಮಾರು 297 ತಾಲಿಬಾನ್ ಉಗ್ರರು ಹತರಾಗಿದ್ದಾರೆ ಎಂದು ವರದಿಯಾಗಿದೆ.

ಈ ದಾಳಿಗೂ ಮುನ್ನ ನಡೆದಿದ್ದ ಸಂಘರ್ಷದಲ್ಲಿ ಪಾಕಿಸ್ತಾನದ 55 ಸೈನಿಕರು ಪ್ರಾಣ ಕಳೆದುಕೊಂಡಿದ್ದರು ಮತ್ತು 23 ಮಂದಿಯನ್ನು ಅಫ್ಘಾನ್ ಪಡೆಗಳು ಬಂಧಿಸಿದ್ದವು. ಈ ಸರಣಿ ಘಟನೆಗಳಿಂದಾಗಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ತಾರಕಕ್ಕೇರಿದ್ದು, ಪಾಕಿಸ್ತಾನವು ಅಫ್ಘಾನಿಸ್ತಾನದ ವಿರುದ್ಧ ಪೂರ್ಣ ಪ್ರಮಾಣದ ಸಮರಕ್ಕೆ ಸಜ್ಜಾದಂತೆ ಕಂಡುಬರುತ್ತಿದೆ.

ಈ ಜಾಗತಿಕ ಬಿಕ್ಕಟ್ಟಿನ ನಡುವೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗವಾಗಿ ಪಾಕಿಸ್ತಾನದ ಪರವಾಗಿ ನಿಂತಿರುವುದು ಅಚ್ಚರಿ ಮೂಡಿಸಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ‘ಶ್ರೇಷ್ಠ ನಾಯಕರು’ ಎಂದು ಬಣ್ಣಿಸಿರುವ ಟ್ರಂಪ್, ಅಫ್ಘಾನಿಸ್ತಾನದ ವಿರುದ್ಧ ಪಾಕಿಸ್ತಾನ ಕೈಗೊಂಡಿರುವ ಕ್ರಮಗಳನ್ನು ‘ಅದ್ಭುತ’ ಎಂದು ಶ್ಲಾಘಿಸಿದ್ದಾರೆ. ಈ ಸಂಘರ್ಷವನ್ನು ನಿವಾರಿಸಲು ತಾವು ಮಧ್ಯಪ್ರವೇಶಿಸುವ ಇಂಗಿತವನ್ನೂ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಈ ಬೆಂಬಲದಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಫ್ಘಾನಿಸ್ತಾನಕ್ಕೆ ದೊಡ್ಡ ಹಿನ್ನಡೆಯಾದಂತಾಗಿದ್ದು, ಪಾಕಿಸ್ತಾನಕ್ಕೆ ರಾಜತಾಂತ್ರಿಕವಾಗಿ ಆನೆಬಲ ಬಂದಂತಾಗಿದೆ.

Comments (0)

Your email address will not be published. Required fields are marked *

Back to top button