ಬೆಂಗಳೂರು: ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ರವರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದ ಬಳಿ ಖಾಲಿ ಬಿಂದಿಗೆಗಳೊಂದಿಗೆ ಕಾರ್ಯಕರ್ತರು ವಿನೂತನ ರೀತಿ ಪ್ರತಿಭಟನೆ ನಡೆಸಿದರು. ಮಹದಾಯಿ, ಮೇಕದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿ ಖಾಲಿ ಬಿಂದಿಗೆಗಳ ಮೂಲಕ ವಾಟಾಳ್ ಪಕ್ಷದ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದ ಬಳಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಖಾಲಿ ಬಿಂದಿಗೆಗಳ ವಿನೂತನ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹದಾಯಿ ನೀರು ಯೋಜನೆ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ನಾಟಕವಾಡುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳ ಚುನಾಯಿತ ಪ್ರತಿನಿಧಿಗಳು ತಮ್ಮ ಸ್ಥಾನಗಳನ್ನು ಬಿಟ್ಟು ನೀರು ಯೋಜನೆಗಳ ಅನುಷ್ಠಾನಕ್ಕಾಗಿ ಬೀದಿಗಿಳಿಯಬೇಕು ಎಂದು ಒತ್ತಾಯಿಸಿದರು.
ಲೋಕಸಭೆಗೆ ಮತ್ತು ರಾಜ್ಯ ಸಭೆಗೆ ಪ್ರಾಮಾಣಿಕ ಚಿಂತನೆ ಇರುವರನ್ನು ಆಯ್ಕೆ ಮಾಡಿ ಹಿಂದಿ ಭಾಷೆ ಹೇರಿಕೆ ಬೇಡವೇ ಬೇಡ ಎಂದ ಅವರು,ರಾಜ್ಯಸಭೆಗೆ ಜಾತಿ, ಹಣ, ನೆಂಟಸ್ಥಿಕೆ ಬೇಡ, ನಾಡಿನ ಬಗ್ಗೆ ತೀವ್ರ ಚಿಂತನಾ ಶಕ್ತಿ ಇರುವವರನ್ನು ಪರಿಗಣಿಸಿ ಕರ್ನಾಟಕ ಹಿತ ಕಾಪಾಡುವವರನ್ನು ಚುನಾವಣೆಗೆ ನಿಲ್ಲಿಸಿ ಎಂದು ಅವರು ಆಗ್ರಹಿಸಿದರು.ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.