Thursday, November 20, 2025
24.6 C
Bengaluru
Google search engine
LIVE
ಮನೆ#Exclusive NewsTop Newsಬೆಂಗಳೂರು ಜಲಮಂಡಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ

ಬೆಂಗಳೂರು ಜಲಮಂಡಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ

ಜಲಮಂಡಳಿ ನೌಕರರಿಗಾಗಿ ವಿಶೇಷ ಕಾರ್ಯಕ್ರಮಗಳ ಅನುಷ್ಠಾನ: ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ಬೆಂಗಳೂರು ಜಲಮಂಡಳಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.

ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್‌ಪ್ರಸಾತ್ ಮನೋಹರ್ ಅವರು ಧ್ವಜಾರೋಹಣ ‌ನೆರವೇರಿಸಿದರು. ನಂತರ ನೆರೆದಿದ್ದ ಜಲಮಂಡಳಿಯ ಅಧಿಕಾರಿಗಳು ಮತ್ತು ನೌಕರರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಬೆಂಗಳೂರು ಮಹಾನಗರಕ್ಕೆ 100ಕಿ.ಮೀ ದೂರದ ಕಾವೇರಿ ನದಿಯಿಂದ ನೀರು ಒದಗಿಸುವಲ್ಲಿ ಜಲಮಂಡಳಿಯ ಸಿಬ್ಬಂದಿಯ ಪಾತ್ರ ಅಪಾರವಾಗಿದೆ. ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಸೂಚನೆ ಅನುಸಾರ ಈ ಜಲಮಂಡಳಿಯ ನೌಕರರ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಕ್ರಮಮಗಳನ್ನು ಹಮ್ಮಿಕೊಳ್ಳಲು ಪ್ರಸಕ್ತ ಸಾಲಿನಲ್ಲಿ ನಿರ್ಧರಿಸಲಾಗಿದೆ. ಕಾವೇರಿ 5ನೇ ಹಂತದ ಯೋಜನೆ ಈ ತಿಂಗಳಾಂತ್ಯಕ್ಕೆ ಅನುಷ್ಠಾನವಾಗುವ ಸಾಧ್ಯತೆ ಇದೆ ಎಂದರು. ಇದೇ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಅವರ ಜೀವನ ಚರಿತ್ರೆ ಒಳಗೊಂಡ ನನ್ನ ಸತ್ಯಾನ್ವೇಷಣೆ ಪುಸ್ತಕವನ್ನು ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜಲಮಂಡಳಿಯ ಪ್ರಧಾನ ಮುಖ್ಯ ಎಂಜನಿಯರ್ ಸುರೇಶ್, ಮುಖ್ಯ ಎಂಜನಿಯರ್ ಗಳು ಮತ್ತು ಅಪರ ಮುಖ್ಯ ಎಂಜನಿಯರ್ ಗಳು, ಜಲಮಂಡಳಿ ನೌಕರರ ವಿವಿಧ ಸಂಘಗಳ ಅಧ್ಯಕ್ಷರುಗಳು ಸೇರಿದಂತೆ ಅನೇಕರು ಇದ್ದರು.

“ಜನನಿ ಜನ್ಮಭೂಮಿ” ಎಂಬ ನೂತನ ದೇಶಭಕ್ತಿಗೀತೆ ಬಿಡುಗಡೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಡಾ. ಬಿ.ಆರ್ .ಅಂಬೇಡ್ಕರ್ ಜಯಂತಿಯ ಪ್ರಯುಕ್ತ ಮಂಡಳಿ ನೌಕರರಿಗಾಗಿ ಏರ್ಪಡಿಸಿದ್ದ ಕ್ರಾಂತಿಗೀತೆಗಳ ಸ್ಪರ್ಧೆಯಲ್ಲಿ ವಿಜೇತರಾದ ಉದಯೋನ್ಮುಖ ಗಾಯಕ ಕುಮಾರ್ .ಎಚ್.ಟಿ ರವರು ಹಾಡಿರುವ ನೂತನ ದೇಶಭಕ್ತಿಗೀತೆಯನ್ನು ಇಂದು ಮಂಡಳಿಯ ಅಧ್ಯಕ್ಷರಾದ ಡಾ.ರಾಮಪ್ರಸಾತ್ ಮನೋಹರ್ ರವರು ಕಾವೇರಿ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು.

ನಾಡಿನ ಹಿರಿಯ ಸಾಹಿತಿಗಳಾದ ಪ್ರೊ.ಬಿ.ಆರ್.ಪೊಲೀಸ್ ಪಾಟೀಲ್ ಅವರು ರಚಿಸಿದ ‘ಜನನಿ ಜನ್ಮಭೂಮಿ’ ಎಂಬ ದೇಶಭಕ್ತಿ ಗೀತೆಗೆ ಅಂತರಾಷ್ಟ್ರೀಯ ಹಿಂದುಸ್ತಾನಿ ಗಾಯಕರಾದ ಪಂಡಿತ್ ಶರಣ್ ಚೌದರಿ ಅವರು ಸಂಗೀತ ನಿರ್ದೇಶನ ಮಾಡಿರುತ್ತಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಈ ಧ್ವನಿಮುದ್ರಿಕೆಯನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಶರಣ್ ಮ್ಯೂಸಿಕ್ ಅಕಾಡೆಮಿ ಯೂಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ.

ಈ ಸಂದರ್ಭದಲ್ಲಿ ಬೆಂಗಳೂರು ಜಲಮಂಡಳಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸದಾಶಿವ ಕಾಂಬಳೆ, ನೌಕರರ ಸಂಘದ ಅಧ್ಯಕ್ಷರಾದ ಮರಿಯಪ್ಪ , ಸ್ಯಾನಿಟರಿ ಯುನಿಯನ್ ಅಧ್ಯಕ್ಷರಾದ ಸಿದ್ದಪ್ಪ, ಹಿರಿಯ ಅಧಿಕಾರಿ,ನೌಕರರು ಭಾಗವಹಿಸಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments