Top Newsವೈರಲ್ ನ್ಯೂಸ್ಸುದ್ದಿ

ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಕಾವಲಾಗಿ ನಿಂತ ಗಜರಾಜ

ಕೇರಳ : ವಯನಾಡು ಭೀಕರ ಭೂಕುಸಿತದಿಂದ ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ. ದೇವರ ರೂಪದಲ್ಲಿ ಬಂದ ಗಜರಾಜ ಮುಂಡಕೈ ನಿವಾಸಿ ಸುಜಾತ ಹಾಗೂ ಕುಟುಂಬಕ್ಕೆ ಇಡೀ ರಾತ್ರಿ ಕಾವಲಾಗಿತ್ತು. ಇದು ಆಶ್ಚರ್ಯ ಎನಿಸಿದರು ಸತ್ಯ. ಈ ಕುರಿತು ಖುದ್ದು ಸುಜಾತ ಅವರೇ ಸ್ಥಳೀಯರೊಬ್ಬರಿಗೆ ಮಾಹಿತಿ ನೀಡಿದ್ದಾರೆ.

ವಯನಾಡು ಭೂಕುಸಿತದಲ್ಲಿ ಇಡೀ ಊರಿಗೆ ಊರೇ ಮಣ್ಣು ಪಾಲಾದರೂ ಈ ಕುಟುಂಬ ಬದುಕಿದ್ದು ಮಾತ್ರ ರೋಚಕ. ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಗಜರಾಜ ಕಾವಲಾಗಿ ನಿಂತಿದ್ದಾನೆ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Comments (0)

Your email address will not be published. Required fields are marked *

Back to top button