ಬೆಂಗಳೂರು: ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಸಂಘಟನೆಗಳು ಮಾರ್ಚ್ 22 ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಗೆ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಾರಾಯಣ ಗೌಡ ಹೇಳಿದರು. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿದ ಅವರು, ಕೆಪಿಎಸ್ಸಿ ನಡೆಸುವ ಕೆಎಎಸ್ ಪರೀಕ್ಷೆ ಬರೆದು ಹೋರಾಟ ನಡೆಸುತ್ತಿರುವ ಸುಮಾರು 76,000 ಜನರ ಜೊತೆ ಒಂದು ತಿಂಗಳಿಂದ ಇದ್ದೇನೆ, ಮಾರ್ಚ್ನಲ್ಲಿ ಪರೀಕ್ಷೆಗಳು ನಡೆಯುವ ಕಾರಣ ಬಂದ್ ಆಚರಿಸಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ, ಅವರು ವರ್ಷವಿಡೀ ಓದಿ ತಯಾರಿ ಮಾಡಿಕೊಂಡಿರುತ್ತಾರೆ, ಅವರು ಪರೀಕ್ಷೆಗೆ ಹೋಗದಂಥ ಸನ್ನಿವೇಶ ಸೃಷ್ಟಿಯಾದರೆ ಹೇಗೆ? ಎಂದು ನಾರಾಯಣಗೌಡ ಹೇಳಿದರು


