#Exclusive NewsTop Newsಸುದ್ದಿ

ಮನಮೋಹನ್​ ಸಿಂಗ್​ ಸ್ಮಾರಕವನ್ನು ಎಲ್ಲಿ ಸ್ಥಾಪಿಸುತ್ತಾರೆ….?

ನವದೆಹಲಿ : ದೇಶದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರಕ್ಕೆ ಕೇಂದ್ರ ಸರ್ಕಾರ ಸರಿಯಾದ ಮತ್ತು ಗೌರವಾನ್ವಿತ ಸ್ಥಳವನ್ನು ಒದಗಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ. ಅವರ ಸ್ಮಾರಕವನ್ನು ನಿರ್ಮಿಸುವ ಸ್ಥಳದಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಅದಾಗ್ಯೂ ಕೇಂದ್ರ ಸರ್ಕಾರ ನಿಗಮ್‌ಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಸಿತ್ತು.

ರಾಷ್ಟ್ರೀಯ ಸ್ಮೃತಿಸ್ಥಳ, ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಗೆ ಗೊತ್ತುಪಡಿಸಿದ ಸ್ಥಳ, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಸ್ಮಾರಕ ಕಿಸಾನ್ ಘಾಟ್, ಸಂಜಯ್ ಗಾಂಧಿ ಸಮಾಧಿ, ಪಿ.ವಿ.ನರಸಿಂಹರಾವ್ ಸಮಾಧಿ ಏಕತಾ ಸ್ಥಳದ ಬಳಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಿಸುವ ಬಗ್ಗೆ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.

ಈ ನಡುವೆ ಕೇಂದ್ರ ಸರ್ಕಾರ ಸ್ಮಾರಕಕ್ಕೆ ಸ್ಥಳ ನೀಡುವ ಭರವಸೆ ನೀಡಿದ್ದು, ಈ ಹಿನ್ನೆಲೆ ಸ್ಥಳ ಪರಿಶೀಲನೆ ಆರಂಭವಾಗಿದೆ. ಈ ನಡುವೆ 2000ನೇ ಇಸವಿಯಲ್ಲಿ ಯುಪಿಎ ಸರ್ಕಾರವು ರಾಜಧಾನಿಯಲ್ಲಿ ಭೂಮಿ ಕೊರತೆ ಹಿನ್ನೆಲೆ ಕಳವಳ ವ್ಯಕ್ತಪಡಿಸಿತ್ತು. ಇದರೊಂದಿಗೆ ಹೊಸ ಸ್ಮಾರಕಗಳನ್ನು ನಿರ್ಮಿಸದಿರಲು ನಿರ್ಧರಿಸಲಾಗಿತ್ತು. ಈ ನಿರ್ಧಾರ ಮನಮೋಹನ್ ಸಿಂಗ್ ಸ್ಮಾರಕಕ್ಕೆ ಅಡ್ಡಿಯಾಗಬಹುದು ಎನ್ನಲಾಗುತ್ತಿದೆ.

Comments (0)

Your email address will not be published. Required fields are marked *

Back to top button