Monday, June 23, 2025
26.3 C
Bengaluru
Google search engine
LIVE
ಮನೆ#Exclusive Newsಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು....!

ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು….!

ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಆರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.ಮೃತ ವಿದ್ಯಾರ್ಥಿಯನ್ನು ನಿರುಪಾದಿ ಹರಿಜನ ಎಂದು ಗುರುತಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ  ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಸೇರಿ ಆರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಕೊಪ್ಪಳ ಡಿಡಿಪಿಐ ಶ್ರೀಶೈಲ್ ಬಿರಾದಾರ್ ಆದೇಶ ಹೊರಡಿಸಿದ್ದಾರೆ.ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ  ಬಾವಿಗೆ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದ. ಘಟನೆಗೆ ಶಿಕ್ಷಕರ ನಿರ್ಲಕ್ಷ್ಯವೇ ಕಾರಣ ಎಂದು ಅಮಾನತು ಮಾಡಿ ಆದೇಶಿಸಿದ್ದಾರೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments