ರಾಜಕೀಯರಾಜ್ಯ

ಬಿಜೆಪಿ ರಾಜ್ಯಧ್ಯಕ್ಷ ಯಾರಾಗ್ತಾರೆ? ಫೆ.20ರೊಳಗೆ ಉತ್ತರ ಸಿಗಲಿದೆ; ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆ.20 ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಮುಂದುವರಿಯುವ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯವೇ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಇನ್ನೂ ಯತ್ನಾಳ ವಿಚಾರವಾಗಿ ಮಾತನಾಡಿದ ವಿಯೇಂದ್ರ ಕೇಂದ್ರ ಶಿಸ್ತು ಸಮಿತಿ ಯತ್ನಾಳರಿಗೆ ನೋಟಿಸ್ ಕೊಟ್ಟಿದೆ. ಯತ್ನಾಳರಿಗೆ ಉತ್ತರಿಸಲು 72ಗಂಟೆ ಗಡುವು ಕೂಡ ಇತ್ತು. ಅದಾದ ಬಳಿಕ ಏನಾಗಿದೆ ಎಂಬುದು ತಿಳಿದಿಲ್ಲ. ಕೇಂದ್ರದ ವರಿಷ್ಠರು ಎಲ್ಲರನ್ನೂ ಗಮನಿಸುತ್ತಿದ್ದಾರೆ ಎಂದು ವಿಜಯೇಂದ್ರ ತಿಳಿಸಿದರು.

Comments (0)

Your email address will not be published. Required fields are marked *

Back to top button