
ತುಮಕೂರು: ಪವರ್ ಶೇರಿಂಗ್ ವಿಚಾರದ ಬಗ್ಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.. ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ವಿಚಾರ ಸಂಪುಟ ಪುನಾರಚನೆ ಮೇಲೆ ನಿಂತಿದೆ. ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಆಗಲಿದ್ದಾರೆ ಎಂದು ರಾಜಣ್ಣ ಹೇಳಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ
ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ರಾಜಣ್ಣ, ಸಿಎಂ ಸಿದ್ದರಾಮಯ್ಯರಿಗೆ ಸಂಪುಟ ಪುನಾರಚನೆ ಮಾಡಲು ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿ ಮುಂದುವರೆಯೋದು ಖಚಿತ. ಇಲ್ಲ ಅಂದರೆ ರಾಜಕೀಯದಲ್ಲಿ ಯಾವುದೇ ಬೆಳವಣಿಗೆ ನಡೆಯಬಹುದು ಎಂದು ರಾಜಣ್ಣ ಪರೋಕ್ಷವಾಗಿ ನವೆಂಬರ್ ಕ್ರಾಂತಿ ಬಗ್ಗೆ ಸುಳಿವು ಕೊಟ್ಟಿದ್ದಾರೆ.
ಇದು ನನ್ನ ಅಸೆಸ್ಮೆಂಟ್ ಎಂದು ನವೆಂಬರ್ ಕ್ರಾಂತಿಯ ಸುಳಿವು ಕೊಟ್ಟ ರಾಜಣ್ಣ. ಈ ಬೆಳವಣಿಗೆ ಕೇವಲ ಕಾಂಗ್ರೆಸ್ ನಲ್ಲಿ ಮಾತ್ರ ಅಲ್ಲ. ಬಿಜೆಪಿಯಲ್ಲೂ ಬದಲಾವಣೆ ಆಗಲಿದೆ ಎಂದಿದ್ದಾರೆ. ಸಂಪುಟ ಪುನಾರಚನೆಯಾಗಲಿದೆ ಎಂದ್ರು.
ಎಲ್ಲವೂ ಬಿಹಾರ ಚುನಾವಣೆ ಫಲಿತಾಂಶದ ಬಗ್ಗೆ ನಡೆಯಲಿದೆ. ಅಲ್ಲಿಯವರೆಗೂ ಯಾವುದೇ ಬೆಳವಣಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯರೇ ಮುಂದುವರಿಯಬಹುದೂ ಅನ್ನೋದನ್ನು ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ.
ಮುಂದಿವರಿದು ಮಾತನಾಡಿದ ರಾಜಣ್ಣ ಅವರು, ಸಂಪುಟ ಪುನಾರಚನೆ ಆಗಲಿದೆ. ಇನ್ಮುಂದೆ ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಮೀಸಲಾತಿ ಇರುವಂತೆ. ಓಬಿಸಿಗಳಿಗೆ ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಮೀಸಲಾತಿ ಕೊಡಬೇಕು. ಎಸ್ಸಿ-ಎಸ್ಟಿ ಮೀಸಲು ಕ್ಷೇತ್ರ ಇರುವಂತೆ ಓಬಿಸಿ ಮೀಸಲು ಕ್ಷೇತ್ರ ಕೊಡಬೇಕು. ಕೇಂದ್ರ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದು ಆಗ್ರಹಿಸಿದ್ದಾರೆ.




