ಭೂತಾನ್: ದೆಹಲಿಯಲ್ಲಿ ನಡೆದ ನಿಗೂಢ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದ್ದಾರೆ.. ಈ ಸ್ಪೋಟದ ಹಿಂದೆ ಯಾರದ್ದೇ ಕೈವಾಡ ಇದ್ದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದ ಸ್ಫೋಟದ ಸಂಚುಕೋರರಗೆ ಎಚ್ಚರಿಕೆ ಕೊಟ್ಟಿದ್ದಾರೆ..
ದೆಹಲಿಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಭೂತಾನ್‌ನಲ್ಲಿ ಮಾತನಾಡಿದ ಅವರು, ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ. ನಿನ್ನೆ ಸಂಜೆ ದೆಹಲಿಯಲ್ಲಿ ನಡೆದ ಭೀಕರ ಘಟನೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಇದು ಖಂಡನೀಯ. ತನ್ನವರನ್ನು ಕಳೆದುಕೊಂಡ ಕುಟುಂಬಸ್ಥರ ನೋವು ನನಗೆ ಅರ್ಥವಾಗುತ್ತದೆ ಎಂದರು. ಇಡೀ ರಾಷ್ಟ್ರ ಇಂದು ಸಂತ್ರಸ್ತ ಕುಟುಂಬಗಳ ಜೊತೆ ನಿಂತಿದೆ ಎಂದರು.
ಈ ಘಟನೆ ಹಿಂದೆ ಯಾರಿದ್ರೂ ಬಿಡೋ ಮಾತೇ ಇಲ್ಲ. ದೆಹಲಿ ಸ್ಫೋಟದಲ್ಲಿ ಪ್ರಾಣ ಬಿಟ್ಟವರಿಗೆ ನ್ಯಾಯ ಕೊಡಿಸೋದು ನಮ್ಮ ಗುರಿ ಈ ಘಟನೆಯನ್ನು ತನಿಖೆ ಮಾಡುತ್ತಿರುವ ಎಲ್ಲಾ ಸಂಸ್ಥೆಗಳೊಂದಿಗೆ ನಾನು ರಾತ್ರಿಯಿಡೀ ಸಂಪರ್ಕದಲ್ಲಿದ್ದೆ. ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಈ ಪಿತೂರಿ ಹಿಂದೆ ಯಾರಿದ್ದರೋ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.


