Top Newsದೇಶ/ವಿದೇಶ

ಪೆಹಲ್ಗಾಂ ಗೆ ಪ್ರಧಾನಿ ಮೋದಿ ಏಕೆ ಭೇಟಿ ನೀಡಲಿಲ್ಲ?

ಬೆಂಗಳೂರು : ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯಾದ ಸ್ಥಳಕ್ಕೆ ಬಿಜೆಪಿಯವರು ಭೇಟಿ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರು ಯಾವಾಗಲೂ ರಾಜಕೀಯವಾಗಿ ಇಂಥ ಪ್ರಕ್ರಣಗಳನ್ನೇ ಹುಡುಕುತ್ತಾರೆ.

ಒಂದು ವಾರದಿಂದ ಪಹಲಗಾಂ ಪ್ರಕರಣದ ಬಗ್ಗೆ ಏನು ಹೇಳುತ್ತಾರೆ. ಉಗ್ರರ ದಾಳಿಗೆ 26 ಜನ ಸಾವನ್ನಪ್ಪಿದ್ದಾರೆ. ಪ್ರಧಾನಿಗಳು ಅಲ್ಲಿಗೆ ಭೇಟಿ ನೀಡಿದ್ದಾರೆಯೇ..? ಬಿಜೆಪಿಯವರಿಗೆ ಹಾಗೂ ಪ್ರಧಾನಿ ಮೋದಿಯವರಿಗೆ ಇದು ಮುಖ್ಯ ಅನ್ನಿಸುತ್ತಿಲ್ಲವೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಪಹಲ್ಗಾಂ ಪ್ರಕರಣ ಭದ್ರತಾ ವೈಫಲ್ಯ ಕಾರಣ

ಪಹಲ್ಗಾಂ ಪ್ರಕರಣ ಭದ್ರತಾ ವೈಫಲ್ಯವಲ್ಲವೇ? ಎಂದು ಪ್ರಶ್ನಿಸಿದ ಸಿಎಂ ಕಾಶ್ಮೀರದಲ್ಲಿ ಒಬ್ಬ ಪೋಲಿಸ್ ಆಗಲಿ, ಭದ್ರತಾ ಪಡೆಯವರಾಗಲಿ ನಿಯೋಜಿಸಿಲ್ಲ. ಯಾರೂ ಇಲ್ಲ ಎಂದರೆ ಏನು ಅರ್ಥ? ನೂರಾರು ಪ್ರವಾಸಿಗರು ಭೇಟಿ ನೀಡುವ ಸ್ಥಳದಲ್ಲಿ ಪೊಲೀಸರು ಇರಬೇಕು ಎಂದರು.

Comments (0)

Your email address will not be published. Required fields are marked *

Back to top button