ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. 177 ದಿನಗಳ ಕಾಲ ಜೈಲಿನಲ್ಲಿದ್ದರೂ ತಮ್ಮ ಸ್ಥಾನದಿಂದ ಕೆಳಗಿಳಿಯದ ಕೇಜ್ರಿವಾಲ್ ಈಗ ಇದ್ದಕ್ಕಿದ್ದಂತೆ ಸಿಎಂ ಕುರ್ಚಿ ಏಕೆ ಬಿಟ್ಟುಕೊಡುತ್ತಿದ್ದಾರೆ ಎನ್ನುವ ಅನುಮಾನ ಎಲ್ಲರನ್ನೂ ಕಾಡಿದೆ.
ಮದ್ಯನೀತಿ ಹಗರಣದಲ್ಲಿ ಜೈಲು ಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಜೈಲಿನಿಂದ ಹೊರಬರುತ್ತಿದ್ದಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ದೆಹಲಿ ಚುನಾವಣೆ ನಡೆಯುವವರೆಗೆ ದೆಹಲಿಗೆ ಅರವಿಂದ್ ಬದಲು ಬೇರೊಬ್ಬರು ಮುಖ್ಯಮಂತ್ರಿಯಾಗಿರಲಿದ್ದಾರೆ. 177 ದಿನಗಳ ಕಾಲ ಜೈಲಿನಲ್ಲಿದ್ದರೂ ತಮ್ಮ ಸ್ಥಾನದಿಂದ ಕೆಳಗಿಳಿಯದ ಕೇಜ್ರಿವಾಲ್ ಈಗ ಇದ್ದಕ್ಕಿದ್ದಂತೆ ಸಿಎಂ ಕುರ್ಚಿ ಏಕೆ ಬಿಟ್ಟುಕೊಡುತ್ತಿದ್ದಾರೆ ಎನ್ನುವ ಅನುಮಾನ ಎಲ್ಲರನ್ನೂ ಕಾಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ.
ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ. ಇವುಗಳಲ್ಲಿ ಎರಡು ಷರತ್ತುಗಳು ಮುಖ್ಯವಾದದ್ದು.