Tuesday, January 27, 2026
24.7 C
Bengaluru
Google search engine
LIVE
ಮನೆ#Exclusive NewsTop Newsಪರ ಸ್ತ್ರೀ ಜೊತೆ ಸರಸ: ಸುಪಾರಿ ಕೊಟ್ಟು ಗಂಡನ ಕಾಲು ಮುರಿಸಿದ ಪತ್ನಿ!

ಪರ ಸ್ತ್ರೀ ಜೊತೆ ಸರಸ: ಸುಪಾರಿ ಕೊಟ್ಟು ಗಂಡನ ಕಾಲು ಮುರಿಸಿದ ಪತ್ನಿ!

ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.

ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ರನ್ನ ಪೊಲೀಸರು ಬಂಧಿಸಿದ್ದಾರೆ.

ವೆಂಕಟೇಶ್ ಕೆಲ ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ, ಹೀಗಾಗಿ ದಂಪತಿಗಳ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಅಂತ ಪತ್ನಿ ಸ್ಕೆಚ್‌ ಹಾಕಿದ್ದಾಳೆ.

ಪತಿಯ ಎರಡೂ ಕಾಲುಗಳನ್ನ ಮುರಿಯಲು 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರೀಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಬಳಿಕ ವೆಂಕಟೇಶ್‌ ಮಗ ಇದು ದರೋಡೆ ಪ್ರಕರಣದ ವೇಳೆ ಕಾಲು ಮುರಿತ ಎಂದು ದೂರು ನೀಡಿದ್ದ. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಸಹ ಬ್ರಹ್ಮಪೂರ ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ವ್ಯಕ್ತಿಯನ್ನು 30 ವರ್ಷದ ತಿಪ್ಪೇಶ ಎಂದು ಗುರುತಿಸಲಾಗಿದೆ. ಅಕ್ಟೋಬರ್ 14, 2024 ರಂದು ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ ಭೋಗನಹಳ್ಳಿ ಕೆರೆ ಬಳಿ ತಿಪ್ಪೇಶನನ್ನು ದುಷ್ಕರ್ಮಿಗಳು ಆತನ ಮಾರ್ಮಂಗಕ್ಕೆ ಒದ್ದು, ಹಲ್ಲೆ ಮಾಡಿ ಕೊಲೆಗೈದಿದ್ದರಂತೆ. ಮೃತದೇಹ ಪತ್ತೆಯಾದ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ್ದ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments