ಬೆಂಗಳೂರು: ಪತ್ನಿಯ ಕುತ್ತಿಗೆಗೆ ಬಟ್ಟೆ ಒಣಗಿಸುವ ದಾರ ಸುತ್ತಿ ಕೊಲೆ ಮಾಡಿ ಬಳಿಕ ಪತಿಯೂ ನೇಣಿಗೆ ಶರಣಾಗಿರುವ ಘಟನೆ ನಗರದ ಚಿಕ್ಕಗೌಡನ ಪಾಳ್ಯದಲ್ಲಿ ನಡೆದಿದೆ..
ಬಿಎಂಟಿಸಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತ ಆಗಿದ್ದ ವೆಂಕಟೇಶನ್ (65), ಪತ್ನಿ ಬೇಬಿ(60) ಅನ್ನು ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.. ಪತ್ನಿ ಬೇಬಿ ಅವರಿಗೆ ಕಲೆ ತಿಂಗಳಿಂದ ಹಿಂದೆ ಸ್ಟ್ರೋಕ್ ಆಗಿ, ವ್ಹೀಲ್ಚೇರ್ನಲ್ಲೇ ಜೀವನ ಸಾಗಿಸುತ್ತಿದ್ದರು. ವೃದ್ದ ದಂಪತಿಗೆ ಇಬ್ಬರು ಮಕ್ಕಳಿದ್ದು ಕೆಲಸ ನಿಮಿತ್ತ ಹೊರಗೆ ತೆರಳಿದ್ದ ವೇಳೆ ಇಬ್ಬರು ಜಗಳ ಮಾಡಿಕೊಂಡು ಜಗಳ ವಿಕೋಪಕ್ಕೆ ತಿರುಗಿ ಮನೆಯಲ್ಲಿದ್ದ ಹಗ್ಗ ತೆಗೆದುಕೊಂಡು ಪತ್ನಿಯ ಕತ್ತಿಗೆ ಸುತ್ತಿ ಕೊಲೆಗೈದಿದ್ದಾನೆ. ಬಳಿಕ ಅದೇ ಹಗ್ಗದಲ್ಲಿ ತಾನು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಕ್ಕಳು ಕೆಲಸಕ್ಕೆ ಹೋಗಿದ್ದಾಗ ದಂಪತಿ ಸಣ್ಣಪುಟ್ಟ ವಿಚಾರಕ್ಕೂ ಜಗಳವಾಡುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಧ್ಯಾಹ್ನ ಸೊಸೆ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಮೃತದೇಹಗಳು ಕಾಣಿಸಿವೆ. ತಕ್ಷಣವೇ ಸುಬ್ರಮಣ್ಯಪುರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ.


