Top Newsಜಿಲ್ಲೆರಾಜ್ಯವೆಬ್ ಸ್ಟೋರೀಸ್ಸುದ್ದಿ

ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್​ ಆಗ್ತಾರಾ..? ಕೋರ್ಟ್‌ನಲ್ಲಿ ಇಂದು ನಿರ್ಧಾರ

ಬೆಂಗಳೂರು : ರೇಣುಕಾಸ್ವಾಮಿ ಕೇಸ್‌ನಲ್ಲಿ ನಟ ದರ್ಶನ್‌ ಹಾಗೂ ಇತರೆ ಆರೋಪಗಳನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡ್ತಾರಾ ಎಂಬುದು ಇಂದು ಕೋರ್ಟ್‌ನಲ್ಲಿ ನಿರ್ಧಾರವಾಗಲಿದೆ..

ಎ1 ಆರೋಪಿ ಪವಿತ್ರಗೌಡ ಬೇಲ್ ಭವಿಷ್ಯ ಕೂಡ ನಿರ್ಧಾರವಾಗಲಿದೆ. ಭದ್ರತಾ ದೃಷ್ಟಿಯಿಂದ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂದು ಸರ್ಕಾರಿ ಪರ ವಕೀಲರು ಮಾಡಿರೋ ಮನವಿ ಅರ್ಜಿ ವಿಚಾರಣೆ ನಡೆಸಲಿದೆ. ಈಗಾಗಲೇ ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದು, ಟ್ರಯಲ್ ಅತೀ ಶೀಘ್ರದಲ್ಲೇ ಪ್ರಾರಂಭ ಆಗ್ತಾ ಇದೆ. ಹೀಗಾಗಿ, ಆರೋಪಿಯನ್ನು ಪದೇ ಪದೇ ಬಳ್ಳಾರಿಯಿಂದ ಕರೆತರಲು ಸಾಧ್ಯವಿಲ್ಲ. ಜೊತೆಗೆ ಆರೋಪಿ ತಾಯಿಗೆ ಕ್ಯಾನ್ಸರ್ ಮಾರಕ ಕಾಯಿಲೆ ಇದ್ದು, ಬಳ್ಳಾರಿಗೆ ಪ್ರಯಣ ಮಾಡಲು ಕಷ್ಟ. ಹೀಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರಿಸುವಂತೆ ಮನವಿ ಮಾಡಿದೆ.

ಇನ್ನು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆ ಜೊತೆಗೆ ಜೈಲಿನಲ್ಲಿ ಕನಿಷ್ಠ ಸವಲತ್ತು ಕೋರಿ ದರ್ಶನ್ ಪರ ವಕೀಲರು ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜೈಲಿನಲ್ಲಿ ಮ್ಯಾನ್ಯುಯಲ್ ಪ್ರಕಾರ ಎರಡು ದಿಂಬು, ಎರಡು ಬೆಡ್ ಶೀಟ್, ದಟ್ಟ ಹಾಗೂ ಹೆಚ್ಚುವರಿ ಬಟ್ಟೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆಯೂ ವಿಚಾರಣೆ ನಡೆಸಿ ನ್ಯಾಯಾಲಯ ಆದೇಶ ಪ್ರಕಟ ಮಾಡುವ ಸಾಧ್ಯತೆ ಇದೆ.

Comments (0)

Your email address will not be published. Required fields are marked *

Back to top button