ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು ಪಶು ಸಂಗೋಪನಾ ಸಚಿವ ವೆಂಕಟೇಶ್ ವಿಧಾನಪರಿಷತ್ ನಲ್ಲಿ ಹೇಳಿದರು.
ಪ್ರತಿ ಲೀಟರ್‌ಗೆ 10 ರೂ. ಹೆಚ್ಚಳ ಮಾಡಬೇಕೆಂದು ರೈತರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದಕ್ಕೆ ಹಾಲು ಉತ್ಪಾದನಾ ಸಂಘಗಳು ಸಹಾ ಸಮ್ಮತಿಸಿವೆ. ಅಂತಿಮವಾಗಿ ರೈತರು ಮತ್ತು ಗ್ರಾಹಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಎಷ್ಟು ಸಾಧ್ಯವೋ ಅಷ್ಟು ಬೇಗ ಕ್ರಮವನ್ನು ತೆಗೆದುಕೊಳ್ಳುವುದಾಗಿ ಹೇಳಿದರು.
ಈಗಾಗಲೇ ರಾಜ್ಯದಲ್ಲಿ ಹಾಲು ಉತ್ಪಾದನೆ ಪ್ರತಿ ದಿನಕ್ಕೆ ಒಂದು ಕೋಟಿ ಲೀಟರ್‌ಗೆ ಹೆಚ್ಚಳವಾಗಿದೆ. ಹಿಂದೆ 95 ಲಕ್ಷ ಇತ್ತು. ಈಗ ಒಂದು ಕೋಟಿಗೂ ಅಧಿಕವಾಗಿದೆ. ಉತ್ಪಾದನಾ ವೆಚ್ಚವು ಹೆಚ್ಚಾಗುತ್ತಿದೆ. ಇದೆಲ್ಲಾ ಅಂಶಗಳನ್ನು ಪರಿಗಣಿಸಿ ನಾವು ಯಾರಿಗೂ ಹೊರೆಯಾಗದಂತೆ ದರ ಪರಿಷ್ಕರಣೆ ಮಾಡುತ್ತೇವೆ.


