Thursday, August 21, 2025
26.4 C
Bengaluru
Google search engine
LIVE
ಮನೆ#Exclusive NewsTop Newsಸಂಸತ್ ಚಳಿಗಾಲದ ಅಧಿವೇಶನ ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ..

ಸಂಸತ್ ಚಳಿಗಾಲದ ಅಧಿವೇಶನ ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ..

  ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಚಾಲನೆ ಸಿಗಲಿದ್ದು, ಡಿ.20ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಇವುಗಳ ಪೈಕಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಖಚಿತವಾಗಿದೆ. ಜೊತೆಗೆ ಸರ್ಕಾರದ ಇನ್ನೊಂದು ಪ್ರಮುಖ ಯೋಜನೆಯಾಗಿರುವ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ ಬಗ್ಗೆ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ. ಆದರೆ  ಯಾವುದೇ ಹಂತದಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ,ಲಂಚದ ಆರೋಪದಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಯುಎಸ್ ನ್ಯಾಯಾಲಯದಿಂದ ದೋಷಾರೋಪಣೆವಿಷಯಗಳನ್ನು ಪ್ರಸ್ತಾಪಿಸಲು  ಕೂಡ ಸಿದ್ಧತೆ ಶುರು ಮಾಡಿವೆ.

ಲೋಕಸಭೆಯಲ್ಲಿ ಬಾಕಿ ಉಳಿದಿರುವ ಮಸೂದೆಗಳು ವಕ್ಫ್ಮ ವಸೂದೆಯನ್ನು ಒಳಗೊಂಡಿದ್ದು, ಉಭಯ ಸದನಗಳ ಜಂಟಿ ಸಮಿತಿಯು ಲೋಕಸಭೆಗೆ ತನ್ನ ವರದಿಯನ್ನು ಸಲ್ಲಿಸಿದ ನಂತರ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ.

ಬ್ಯಾಂಕಿಂಗ್ ನಿಯಮಗಳನ್ನು ಸುಧಾರಿಸಲು ಸರ್ಕಾರವು ಮತ್ತೊಂದು ದೊಡ್ಡ ಹೆಜ್ಜೆಯನ್ನು ಇಡಲಿದೆ. ವಕ್ಫ್  ಮಸೂದೆ ಮತ್ತು ಮುಸಲ್ಮಾನ್ ವಕ್ಫ್  ಮಸೂದೆ ಸೇರಿದಂತೆ ಎಂಟು ಮಸೂದೆಗಳು ಲೋಕಸಭೆಯಲ್ಲಿ ಬಾಕಿ ಉಳಿದಿವೆ. ಲೋಕಸಭೆಯ ಬುಲೆಟಿನ್ ಪ್ರಕಾರ, ರಾಜ್ಯಸಭೆಯಲ್ಲಿ ಎರಡು ಮಸೂದೆಗಳು ಬಾಕಿ ಉಳಿದಿವೆ.

ಮಂಡನೆ/ಅಂಗೀಕಾರ ಆಗಲಿರುವ ಮಸೂದೆ:
1. ವಕ್ಫ್ ತಿದ್ದುಪಡಿ ಮಸೂದೆ
2. ಕರಾವಳಿ ನೌಕಾಯಾನ ಮಸೂದೆ
3. ಒಂದು ದೇಶ ಒಂದು ಚುನಾವಣೆ
4. ಭಾರತೀಯ ವಾಯುಯಾನ ಮಸೂದೆ
5. ಮರ್ಚಂಟ್ ಶಿಪ್ಪಿಂಗ್ ಮಸೂದೆ
6. ಸಹಕಾರ ವಿವಿ ಸ್ಥಾಪನೆ ಮಸೂದೆ
7. ಪಂಜಾಬ್ ನ್ಯಾಯಾಲಯಗಳ ಮಸೂದೆ
8. ರೈಲ್ವೆ ತಿದ್ದುಪಡಿ ಮಸೂದೆ
9. ಬ್ಯಾಂಕಿಂಗ್ ತಿದ್ದುಪಡಿ ಮಸೂದೆ

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments