ಚಿಕ್ಕಮಗಳೂರು: ಮಂಗನ ಕಾಯಿಲೆಗೆ (ಮಂಕಿಪಾಕ್ಸ್) ತುತ್ತಾಗಿದ್ದ 65 ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಮಂಗನ ಕಾಯಿಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿದೆ.
ನರಸಿಂಹರಾಜಪುರ ತಾಲೂಕು ಕಟ್ಟಿನಮನೆ ಗ್ರಾಮದ ಮಹಿಳೆ ಮಂಗನ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ. ತಾಯಿ ಮತ್ತು ಮಗ ಮೇಲ್ಪಾಲ್ ಗ್ರಾಮದ ಕಾಫಿತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.
ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಂಗನ ಕಾಯಿಲೆ ಜತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇದ್ದ ಹಿನ್ನಲೆ ಹೆಚ್ಚಿನ ಚಿಕಿತ್ಸೆ ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದಾರೆ.
ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಮೊದಲ ಬಲಿ ಪಡೆದುಕೊಂಡಿದೆ.


