Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ : ಚಿನ್ನದ ಸರ, ಮೊಬೈಲ್ ದರೋಡೆ

ಬೆಂಗಳೂರು: ನಗರದ ಕೆ.ಆರ್ ಮಾರುಕಟ್ಟೆ ಬಳಿ ಬಸ್‌ಗಾಗಿ ಕಾಯುತ್ತಿದ್ದ  ಮಹಿಳೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು ಈ ಸಂಬಂಧ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ್, ಶರವಣ ಬಂಧಿತ ಆರೋಪಿಗಳಾಗಿದ್ದು, ಕೆ.ಆರ್‌ ಮಾರ್ಕೆಟ್‌ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಏನಿದು ಪ್ರಕರಣ?
ಕಳೆದ ಭಾನುವಾರ ಮಧ್ಯರಾತ್ರಿ 11.30ರ ವೇಳೆಗೆ ತಮಿಳುನಾಡಿನಿಂದ ಬಂದ ಮಹಿಳೆ ಯಲಹಂಕಕ್ಕೆ ತೆರಳಲು ಕೆ.ಆರ್ ಮಾರ್ಕೆಟ್ ಬಳಿ ಬಸ್ ಗಾಗಿ ಕಾಯುತ್ತಿರುವಾಗ ಘಟನೆ ನಡೆದಿದೆ.

ಯಲಹಂಕ ಕಡೆಗೆ ಬಸ್ ಬರದ ಕಾರಣ ಬಸ್ ಎಲ್ಲಿ ಬರುತ್ತೆ ಅಂತಾ ದುಷ್ಕರ್ಮಿಗಳನ್ನ ವಿಚಾರಿಸಿದ್ದಾರೆ. ಬಸ್ ಬರುವ ಜಾಗ ತೋರಿಸತ್ತೇವೆ ಅಂತಾ ಬಸ್ ನಿಲ್ದಾಣದ ಸಮೀಪದಲ್ಲೇ ಇರುವ ಗೋಡೌನ್ ಸ್ಟ್ರೀಟ್‌ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರ ಮಾಡಿ ಮಹಿಳೆಯ ಮೇಲಿದ್ದ ಆಭರಣಗಳನ್ನ ದೋಚಿ ಪರಾರಿಯಾಗಿದ್ದಾರೆ. ಸಂತ್ರಸ್ತ ಮಹಿಳೆ ಬೆಂಗಳೂರಿನ ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ವಿಶೇಷ ತಂಡಗಳನ್ನ ರಚಿಸಿ ಕಾಮುಕರಿಗೆ ಹೆಡೆಮುರಿ ಕಟ್ಟಲು ಬಲೆ ಬೀಸಿದ್ದರು. ಇಂದು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

Comments (0)

Your email address will not be published. Required fields are marked *

Back to top button