Top Newsರಾಜಕೀಯರಾಜ್ಯಸುದ್ದಿ

ಮೈಕ್ರೋ ಫೈನಾನ್ಸ್ ಕಿರುಕುಳ: ಪರಿಶೀಲಿಸಲು ಜಿಲ್ಲಾಡಳಿತಗಳಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ

ಬೆಂಗಳೂರು: ಸ್ಥಳೀಯ ಕಿರುಬಂಡವಾಳ ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವುದರಿಂದ ಅನೇಕ ಮಹಿಳೆಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿರುವ ರಾಜ್ಯ ಮಹಿಳಾ ಆಯುಕ್ತೆ ನಾಗಲಕ್ಷ್ಮಿ ಚೌಧರಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ನಿಗಾ ಇಡಲು ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಶುಕ್ರವಾರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ನಾಗಲಕ್ಷ್ಮಿ, ಮಹಿಳೆಯರಿಂದ ಹಲವಾರು ಕಿರುಕುಳ ದೂರುಗಳು ಬರುತ್ತಿವೆ ಎಂದು ಹೇಳಿದರು.

ನಾನು ಅನೇಕ ಸ್ಥಳಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭೇಟಿ ನೀಡಿದಾಗ, ಬಹಳಷ್ಟು ಮಹಿಳೆಯರು ಮುಂದೆ ಬಂದು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ತಮ್ಮನ್ನು ಹೇಗೆ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ ಎಂದು ತಮ್ಮ ಅಳಲನ್ನು ಹೇಳಿಕೊಂಡಿದ್ದಾರೆ. ಅವರು ಸಾಲವನ್ನು ಮರುಪಾವತಿಸಲು ತಮ್ಮ ಆಭರಣಗಳನ್ನು ಸಹ ಮಾರಾಟ ಮಾಡಿದ್ದಾರೆ ಎಂದು ಹೇಳಿದರು,

ಚಿತ್ರಹಿಂಸೆಯಿಂದ ತಮ್ಮನ್ನು ರಕ್ಷಿಸುವಂತೆ ಅವರು ನನ್ನಲ್ಲಿ ಮನವಿ ಮಾಡಿದರು ಎಂದ್ರು. ಯಾವುದೇ ಸಮಯದಲ್ಲಿ ಜನರು ಬಂದು ಪೊಲೀಸರಿಗೆ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ದೂರುಗಳನ್ನು ಸಲ್ಲಿಸಬಹುದು ಎಂದು ಜನರಿಗೆ ಆಡಳಿತವು ಭರವಸೆ ನೀಡಬೇಕು ಎಂದು ಅವರು ಹೇಳಿದರು.

Comments (0)

Your email address will not be published. Required fields are marked *

Back to top button