ಕ್ರಿಕೆಟ್ ಪ್ರೇಮಿಗಳಿಗೆ ಈಗ ಹಬ್ಬದ ಕಾಲ! ಒಂದು ಕಡೆ ಪುರುಷರ ಟಿ20 ವಿಶ್ವಕಪ್ ಸೂಪರ್-8 ಹಂತದ ರೋಚಕತೆ ಮನೆ ಮಾಡಿದ್ದರೆ, ಮತ್ತೊಂದೆಡೆ 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿಯನ್ನು ಐಸಿಸಿ ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯ ವಹಿಸಲಿದ್ದು, ಜೂನ್ 12 ರಿಂದ ಜುಲೈ 5 ರವರೆಗೆ ಕ್ರಿಕೆಟ್ ಹಬ್ಬ ನಡೆಯಲಿದೆ.
ಟೂರ್ನಿಯಲ್ಲಿ ಒಟ್ಟು 12 ತಂಡಗಳು ಭಾಗವಹಿಸಲಿದ್ದು, ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಗುಂಪು 1ರಲ್ಲಿರುವ ಭಾರತ ತಂಡವು ತನ್ನ ಮೊದಲ ಪಂದ್ಯದಲ್ಲೇ ಬದ್ಧ ವೈರಿ ಪಾಕಿಸ್ತಾನವನ್ನು ಎದುರಿಸಲಿದೆ. ಸೆಮಿಫೈನಲ್ ಪಂದ್ಯಗಳು ಜೂನ್ 30 ಮತ್ತು ಜುಲೈ 2 ರಂದು ನಡೆದರೆ, ಜುಲೈ 5 ರಂದು ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.


