#Exclusive NewsTop Newsದೇಶ/ವಿದೇಶಸುದ್ದಿ

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ’ಜಾಕಿರ್ ಹುಸೇನ್’ ನಿಧನ…….!

 

ದೆಹಲಿ: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್​, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಮಾರ್ಚ್ 9, 1951 ರಂದು ಮುಂಬೈನಲ್ಲಿ ಜನಿಸಿದ ಜಾಕಿರ್ ಹುಸೇನ್, ಚಿಕ್ಕ ವಯಸ್ಸಿನಿಂದಲೂ ಸಂಗೀತದ ವಾತಾವರಣದಲ್ಲಿ ಬೆಳೆದವರು. ಅವರ ತಂದೆಯ ಕಟ್ಟುನಿಟ್ಟಿನ ಮಾರ್ಗದರ್ಶನದಲ್ಲಿ ಜಾಕಿರ್ ಹುಸೇನ್​​ ಅಸಾಧಾರಣ ಪ್ರತಿಭೆಯಾಗಿ ಹೊರಹೊಮ್ಮಿದರು.

ಮುಂಬೈನ ಮಾಹಿಂ ಪ್ರದೇಶದ ಸೇಂಟ್ ಮೈಕೆಲ್ ಸ್ಕೂಲ್​ನಲ್ಲಿ ವ್ಯಾಸಂಗ ಮಾಡಿದ್ದು, ತಮ್ಮ ಏಳನೇ ವಯಸ್ಸಿನಲ್ಲೇ ಸಾರ್ವಜನಿಕವಾಗಿ ತಬಲಾ ಪ್ರದರ್ಶನ ನೀಡುತ್ತಿದ್ದರು. 12ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸತೊಡಗಿದರು. ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಪದವಿ ಕೂಡ ಪಡೆದಿದುಕೊಂಡಿದ್ದಾರೆ. ಜೊತೆಗೆ ಪ್ರಮುಖ ವಿಶ್ವವಿದ್ಯಾಲಯಗಳ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದು, ಹಲವಾರು ಹಾಲಿವುಡ್ ಚಿತ್ರಗಳಲ್ಲಿ ಕೂಡ ಕಾರ್ಯ ನಿರ್ವಹಿಸಿದ್ದಾರೆ. ನಂತರ ಭಾರತ ಸೇರಿದಂತೆ ವಿಶ್ವದಾದ್ಯಂತ ತಬಲಾ ವಾದನ ಪ್ರಖ್ಯಾತಿಗಳಿಸಿದ್ದರು.

 

Comments (0)

Your email address will not be published. Required fields are marked *

Back to top button