Top Newsಸುದ್ದಿ

ಭಾರತದ ಸುದ್ದಿವಾಹಿನಿಗಳು ಯುವಜನತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ : ಬಾಂಗ್ಲಾದೇಶ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ

ಢಾಕಾ: ತಮ್ಮ ವಿರುದ್ಧ ಪ್ರಚೋದನಕಾರಿ ವಿಷಯಗಳ ಬಗ್ಗೆ ಸುದ್ದಿಗಳನ್ನು ಉಲ್ಲೇಖಿಸಿ ಸುದ್ದಿವಾಹಿನಿಗಳು ಪ್ರಸಾರ ಮಾಡುತ್ತಿದ್ದು, ಹೀಗಾಗಿ ಭಾರತದ ಎಲ್ಲಾ ಸುದ್ದಿವಾಹಿನಿಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಬಾಂಗ್ಲಾದೇಶ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ವಕೀಲ ಎಖ್ಲಾಸ್ ಉದ್ದೀನ್ ಭುಯಾನ್ ಎಂಬುವವರು ಅರ್ಜಿ ಸಲ್ಲಿಸಿದ್ದು, ಈ ವಿಷಯವನ್ನು ಅವರೇ ದೃಢಪಡಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಫಾತಿಮಾ ನಜೀಬ್ ಸಿಕ್ದರ್ ಮಹಮುದೂರ್ ರಾಜಿ ಅವರನ್ನೊಳಗೊಂಡ ಹೈಕೋರ್ಟ್ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಬಹುದು ಎಂದು ವಕೀಲ ಭೂಯಾನ್ ಹೇಳಿದ್ದಾರೆ. ಬಾಂಗ್ಲಾದೇಶದಲ್ಲಿ ಎಲ್ಲಾ ಭಾರತೀಯ ಸುದ್ದಿ ವಾಹಿನಿಗಳ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಎಲ್ಲಾ ಭಾರತೀಯ ಟಿವಿ ಚಾನೆಲ್‌ಗಳ ಪ್ರಸಾರವನ್ನು ನಿಷೇಧಿಸಲು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಆಪರೇಷನ್ ಆಕ್ಟ್ 2006 ರ ಸೆಕ್ಷನ್ 29 ರ ಅಡಿಯಲ್ಲಿ ನಿರ್ದೇಶನ ನೀಡುವಂತೆ ರಿಟ್ ಅರ್ಜಿಯಲ್ಲಿ ಕೋರಲಾಗಿದೆ. ಬಾಂಗ್ಲಾದೇಶದಲ್ಲಿ ಭಾರತೀಯ ಟಿವಿ ಚಾನೆಲ್‌ಗಳ ಮೇಲೆ ನಿಷೇಧ ಹೇರುವ ನಿಯಮವನ್ನು ಏಕೆ ಹೊರಡಿಸಬಾರದು ಎಂದು ರಿಟ್ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.

ಸ್ಟಾರ್ ಜಲ್ಶಾ, ಸ್ಟಾರ್ ಪ್ಲಸ್, ಝೀ ಬಾಂಗ್ಲಾ, ರಿಪಬ್ಲಿಕ್ ಬಾಂಗ್ಲಾ ಮತ್ತು ಇತರ ಭಾರತೀಯ ಸುದ್ದಿವಾಹಿನಿಗಳ ಪ್ರಸಾರವನ್ನು ನಿಷೇಧಿಸಲು ರಿಟ್ ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ಭಾರತೀಯ ಸುದ್ದಿವಾಹಿನಿಗಳಲ್ಲಿ ಪ್ರಚೋದನಕಾರಿ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಬಾಂಗ್ಲಾದೇಶದ ಸಂಸ್ಕೃತಿಯನ್ನು ವಿರೋಧಿಸುವ ವಿಷಯದ ಅನಿಯಂತ್ರಿತ ಪ್ರಸಾರಗಳು ಯುವಜನತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

Comments (0)

Your email address will not be published. Required fields are marked *

Back to top button