ಯಾದಗಿರಿ: ಕಲುಷಿತ ಆಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣ ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸುರಪುರ ಗ್ರಾಮದ ವಸತಿ ನಿಲಯದಲ್ಲಿ ನಡೆದಿದೆ. ಈ ಘಟನೆಯಿಂದ ಜನರು ಆತಂಕಗೊಂಡಿದ್ದಾರೆ.
ವಸತಿ ನಿಲಯದ 100 ವಿದ್ಯಾರ್ಥಿಗಳು ಇದ್ದೂ, ಸುರಪುರನ ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯದಲ್ಲಿದ್ದರು. ಬೆಳಗ್ಗೆ ಹುಳ ಬಿದ್ದ ಆಹಾರವನ್ನು ಸೇವನೆ ಮಾಡಿದರಿಂದ ತಲೆ ಸುತ್ತು ಬಂದು ಬಿದ್ದಿದ್ದಾರೆ. ಹೀಗಾಗಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸುರಪುರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಆಹಾರದಲ್ಲಿ ಹುಳಗಳು ಪತ್ತೆಯಾಗಿದ್ದು, ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೆ ಇದಕ್ಕೆ ಕಾರಣವಾಗಿದೆ. ವಸತಿ ನಿಲಯದಲ್ಲಿ ಗುಣ ಮಟ್ಟದ ಆಹಾರ, ಅಡುಗೆ ಕೊಠಡಿ, ನೀರು ಸಂಗ್ರಹ ಸ್ಥಳ, ಶೌಚಾಲಯ ಸೇರಿದಂತೆ ಹಲವು ಸ್ಥಳಗಳನ್ನು ಪರಿಶೀಲಿಸಿ ಸ್ವಚ್ಛತೆ ಕಾಪಾಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು.